ಬದೌನ್ ಗ್ಯಾಂಗ್ರೇಪ್: ಕುಟುಂಬಸ್ಥರಿಗೆ ಮಾಯಾ ಸಾಂತ್ವನ

ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಐವರ ದುಷ್ಕೃತ್ಯಕ್ಕೆ ಬಲಿಯಾದ ಇಬ್ಬರು ದಲಿತ ಬಾಲಕಿಯರ ಮನೆಗೆ ಭಾನುವಾರ ಭೇಟಿ ನೀಡಿದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಗ್ರಾಮಕ್ಕೆ ಹೆಲಿಕಾಫ್ಟರ್ ಮೂಲಕ ಬಂದಿಳಿದ ಮಾಯಾವತಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಬಳಿಕ ದಲಿತ ಬಾಲಕಿಯರ ಶವಗಳನ್ನು ನೇಣು ಹಾಕಿದ ಜಾಗದಲ್ಲಿ ಮಾತನಾಡಿದ ಅವರು, ಬಾಲಕಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾವದ್ ಅವರ ಹೇಳಿಕೆಯಿಂದಾಗಿಯೇ ಉತ್ತರಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಿದರು. ಉತ್ತರಪ್ರದೇಶದಲ್ಲಿ ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಜಂಗಲ್ ರಾಜ್ ವ್ಯವಸ್ಥೆ ಶುರುವಾಗಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಮಾಯಾವತಿ ಒತ್ತಾಯಿಸಿದ್ದಾರೆ.
ದೇಶಾದ್ಯಂತ ಖಂಡನೆಗೆ ಒಳಗಾಗಿರುವ ಬದೌನ್ ದಲಿತರ ರೇಪ್ ಕೇಸ್ ಘಟನೆ ನಡೆದ ಗ್ರಾಮಕ್ಕಾಗಮಿಸಿದ ಮಾಯಾವತಿಯನ್ನು ಹೆಲಿಕಾಫ್ಟರನ್ನು ಇಳಿಸುವುದಕ್ಕಾಗಿ ಹೆಲಿಪ್ಯಾಡ್ನ್ನು ಚಿಕ್ಕ ಬಾಲಕನಿಂದ ಸ್ವಚ್ಛಗೊಲಿಸಿದ್ದು ವಿವಾದಕ್ಕೆ ಕಾರಣವಾಗಿದೆ.
ನಿನ್ನೆಯಷ್ಟೆ ಹತ್ಯಾಚಾರಕ್ಕೊಳಗಾದ ದಲಿತ ಬಾಲಕಿಯರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದರಿಂದ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.
ಘಟನೆ ನಡೆದು ಐದು ದಿನ ಕಳೆದರು ಇಲ್ಲಿಯವರೆಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹತ್ಯಾಚಾರಕೊಳ್ಳಗಾದ ದಲಿತ ಬಾಲಕಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳದೆ ಇರುವುದು ತೀವ್ರ ವಿರೋಧಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


