ಈಗಿನ ಸುದ್ದಿ

ಬದೌನ್ ಗ್ಯಾಂಗ್‌ರೇಪ್: ತಪ್ಪೋಪ್ಪಿಕೊಂಡ 2 ಶಂಕಿತರು

ಬದೌನ್ ಗ್ಯಾಂಗ್‌ರೇಪ್: ತಪ್ಪೋಪ್ಪಿಕೊಂಡ 2 ಶಂಕಿತರು
Published On :

ನವದೆಹಲಿ: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇಬ್ಬರು ದಲಿತ ಬಾಲಕಿಯರ 'ಹತ್ಯೆ'ಚಾರ ಗೈದು ನೇಣು ಬೀಗಿದಿದ್ದ ಪ್ರಕರಣದ ಐವರು ಆರೋಪಿಗಳ ಪೈಕಿ ಇಬ್ಬರು ತಪ್ಪೋಪ್ಪಿಕೊಂಡಿದ್ದಾರೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೂ ಮುನ್ನು ಇಬ್ಬರು ದಲಿತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಇಬ್ಬರು ಶಂಕಿತ ಆರೋಪಿಗಳು ತಪ್ಪೋಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಅತುಲ್ ಸೆಕ್ಸೇನಾ ಅವರು ಹೇಳಿದ್ದಾರೆ.

14 ಮತ್ತು 15 ವಯಸ್ಸಿನ ಇಬ್ಬರು ಸಹೋದರಿಯರು ಮೇ 27ರಂದು ಕಾಣೆಯಾಗಿದ್ದರು. ಮಾರನೇ ದಿನ ಬೆಳಗ್ಗೆ ಮಾವಿನ ಮರವೊಂದರಲ್ಲಿ ಇವರಿಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಹೋದರಿಯರ ಮೇಲೆ 7 ಮಂದಿ ರಾಕ್ಷಸರು ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಮರಕ್ಕೆ ನೇತುಹಾಕಿದ್ದ ವಿಚಾರ ಮರಣೋತ್ತರ ವರದಿಯಿಂದ ಬಹಿರಂಗವಾಗಿತ್ತು. ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶ, ಚರ್ಚೆಗೆ ಕಾರಣವಾಗಿತ್ತು.


ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳಿದ್ದು, ಇದರಲ್ಲಿ 5 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.  ಅದರಲ್ಲಿ ಸರ್ವೇಶ್ ಯಾದವ್  ಮತ್ತು ಛತ್ರಪಾಲ್ ಯಾದವ್ ಎಂಬ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಪಪ್ಪು, ಅವ್‌ದೇಶ್ ಯಾದವ್ , ಉರ್ವೇಶ್ ಯಾದವ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಒತ್ತಾಯಕ್ಕೆ ಮಣಿದು ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಲು ಒಪ್ಪಿಗೆ ಸೂಚಿಸಿತ್ತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.