ಬಿಜೆಪಿ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ ಮೋದಿ

ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭರ್ಜರಿ ಗೆಲುವಿಗೆ ಸಹಕರಿಸಿದ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೂ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಧನ್ಯವಾದ ಅರ್ಪಿಸಿದರು.
ಇಂದು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮೋದಿ ಅವರನ್ನು ಬಿಜೆಪಿ ಕಾರ್ಯಕರ್ತರು ಭೇಟಿ ಮಾಡಿದರು. ಈ ವೇಳೆ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಭರ್ಜರಿ ಜಯ ಗಳಿಸಲು ನಿರಂತರವಾಗಿ ದುಡಿದ ಬಿಜೆಪಿ ಕಾರ್ಯಕರ್ತರನ್ನು ವಿಶೇಷವಾಗಿ ಪ್ರಶಂಸಿಸಿದರು.
ನಂತರ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶದ ಅಭಿವೃದ್ಧಿಗೆ ಎಂಥ ಸರ್ಕಾರ ಬೇಕು ಎಂಬುದನ್ನು ದೇಶದ ಜನತೆ ಅರಿತಿದ್ದಾರೆ ಇದಕ್ಕಾಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಜಯಶಾಲಿಯನ್ನಾಗಿಸಿದ್ದಾರೆ. ದೇಶದ ಜನತೆ ನೀಡಿದ ತೀರ್ಪು ಕೇವಲ ಗಣಿತ ಲೆಕ್ಕವಲ್ಲ. ಇದು ದೇಶದ ಅಭಿವೃದ್ಧಿಗೆ ಹಿಡಿದ ಕನ್ನಡಿ ಎಂದರು.
ದೇಶದ ಜನತೆ ಪ್ರಜಾಪ್ರಭುತ್ವದ ಮೇಲೆ ಭರವಸೆ ಇಟ್ಟಿದ್ದಾರೆ ಹೀಗಾಗಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುತ್ತೇನೆ ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


