ಈಗಿನ ಸುದ್ದಿ

ದಲಿತ ಬಾಲಕಿಯರ 'ಹತ್ಯೆ'ಚಾರ ದುರದೃಷ್ಟಕರ: ಸಿಎಂ ಅಖಿಲೇಶ್

ದಲಿತ ಬಾಲಕಿಯರ 'ಹತ್ಯೆ'ಚಾರ ದುರದೃಷ್ಟಕರ: ಸಿಎಂ ಅಖಿಲೇಶ್
Published On :

ಬದೌನ್: ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದ ಇಬ್ಬರು ದಲಿತ ಬಾಲಕಿಯರ 'ಹತ್ಯೆ'ಚಾರ ದುರದೃಷ್ಟಕರ ಘಟನೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ.

ಪ್ರಕರಣ ನಡೆದು ಒಂದು ವಾರ ಕಳೆದ ನಂತರ ಘಟನೆ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್ ಯಾದವ್, ಇದೊಂದು ದುರದೃಷ್ಟಕರ ಘಟನೆ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದರು.

ಇದೇ ವೇಳೆ, ಇಬ್ಬರು ಬಾಲಕಿಯರ ಹತ್ಯೆಗೂ ಮುನ್ನ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಪೊಲೀಸರ ವಿಚಾರಣೆಯಿಂದ ಬಹಿರಂಗಗೊಂಡಿದೆ ಎಂದರು.

ಘಟನೆ ನಡೆದು ವಾರ ಕಳೆದರು ಈ ಕುರಿತು ಪ್ರತಿಕ್ರಿಯೆ ನೀಡದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧ ಟೀಕೆಗಳು ಕೇಳಿ ಬಂದಿತ್ತು.

ಇಂದು ದಲಿತ ಬಾಲಕಿಯರ ಮನೆಗೆ ಭೇಟಿ ನೀಡಿದ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ, ಬಾಲಕಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದರು.

ನಿನ್ನೆಹತ್ಯಾಚಾರಕ್ಕೊಳಗಾದ ದಲಿತ ಬಾಲಕಿಯರ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಆಗ್ರಹಿಸಿದ್ದರಿಂದ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು.


14 ಮತ್ತು 15 ವಯಸ್ಸಿನ ಇಬ್ಬರು ಸಹೋದರಿಯರು ಮೇ 27ರಂದು ಕಾಣೆಯಾಗಿದ್ದರು. ಮಾರನೇ ದಿನ ಬೆಳಗ್ಗೆ ಮಾವಿನ ಮರವೊಂದರಲ್ಲಿ ಇವರಿಬ್ಬರ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಹೋದರಿಯರ ಮೇಲೆ 7 ಮಂದಿ ರಾಕ್ಷಸರು ಸಾಮೂಹಿಕ ಅತ್ಯಾಚಾರ ನಡೆಸಿ, ನಂತರ ಮರಕ್ಕೆ ನೇತುಹಾಕಿದ್ದ ವಿಚಾರ ಮರಣೋತ್ತರ ವರದಿಯಿಂದ ಬಹಿರಂಗವಾಗಿತ್ತು. ಈ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶ, ಚರ್ಚೆಗೆ ಕಾರಣವಾಗಿತ್ತು.


ಪ್ರಕರಣದಲ್ಲಿ ಏಳು ಮಂದಿ ಆರೋಪಿಗಳಿದ್ದು, ಇದರಲ್ಲಿ 5 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ.  ಅದರಲ್ಲಿ ಸರ್ವೇಶ್ ಯಾದವ್  ಮತ್ತು ಛತ್ರಪಾಲ್ ಯಾದವ್ ಎಂಬ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಪಪ್ಪು, ಅವ್‌ದೇಶ್ ಯಾದವ್ , ಉರ್ವೇಶ್ ಯಾದವ್‌ರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.