ಸಾಮಾಜಿಕ ಜಾಲತಾಣದ ಹೆಚ್ಚು ಬಳಕೆ ಏಕಾಗ್ರತೆ ಮೇಲೆ ಪರಿಣಾಮ ಬೀರುವುದಿಲ್ಲ: ಅಧ್ಯಯನ ವರದಿ

ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಕೆ ಮಾಡುವುದು ವ್ಯಕ್ತಿಯ ಏಕಾಗ್ರತೆಯ ಶಕ್ತಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಂಶೋಧನಾ ವರದಿ ತಿಳಿಸಿದೆ.
ಸಾಮಾಜಿಕ ಜಾಲತಾಣ
ಸಾಮಾಜಿಕ ಜಾಲತಾಣ

ನ್ಯೂಯಾರ್ಕ್: ಸಾಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಕೆ ಮಾಡುವುದು ವ್ಯಕ್ತಿಯ ಏಕಾಗ್ರತೆಯ ಶಕ್ತಿ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸಂಶೋಧನಾ ವರದಿ ತಿಳಿಸಿದೆ.
ಅತ್ಯಾಧುನಿಕ ಸಂವಹನ ಸಾಧನಗಳು ಏಕಾಗ್ರತೆ ಶಕ್ತಿಯನ್ನು ಕುಗ್ಗಿಸುತ್ತವೆ ಎಂಬ ಊಹಾಪೋಹಗಳಿಗೆ ಸಂಬಂಧಿಸಿದಂತೆ ಫ್ಲೋರಿಡಾ ದ ವಿಶ್ವವಿದ್ಯಾನಿಲಯವೊಂದು ಸಂಶೋಧನೆ ನಡೆಸಿದ್ದು, ಏಕಾಗ್ರತೆಗೆ ಶಕ್ತಿ ಕುಗ್ಗುವುದಕ್ಕೂ ಸಮಾಜಿಕ ಜಾಲತಾಣಗಳನ್ನು ಹೆಚ್ಚು ಬಳಸುವುದಕ್ಕೂ ಸಂಬಂಧವಿಲ್ಲ ಎಂಬುದನ್ನು ಅಲ್ಲಿನ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
209 ಜನರನ್ನು ಸಂಶೋಧನೆಗೆ ಒಳಪಡಿಸಲಾಗಿದ್ದು, ಸ್ವಯಂ ಪ್ರೇರಿತ ಪ್ರಶ್ನೆಗಳನ್ನು ಹಾಕಿಕೊಳ್ಳುವಂತೆ ಸಂಶೋಧನೆಗೆ ಒಳಪಟ್ಟಿದ್ದ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಸಮೀಕ್ಷೆಯಲ್ಲಿ ಏಕಾಗ್ರತೆ ಮೇಲೆ ಸಾಮಾಜಿಕ ಜಾಲತಾಣಗಳು ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಅಭ್ಯರ್ಥಿಗಳು ಹೇಳಿದ್ದಾರೆ.
ಏಕಾಗ್ರತೆ ಶಕ್ತಿ ಮಾತ್ರವಲ್ಲದೇ, ಸಮಯ ನಿರ್ವಹಣೆ, ದೀರ್ಘಾವಧಿ ಸಮಸ್ಯೆಗಳ ಮೇಲೂ ಸಾಮಾಜಿಕ ಜಾಲತಾಣವನ್ನು ಬಳಕೆ ಮಾಡುವುದು ಪರಿಣಾಮ ಬೀರುವುದಿಲ್ಲ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳು ವ್ಯಕ್ತಿಯೊಬ್ಬರ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ, ಆದ್ದರಿಂದ ಅದನ್ನು ಚಟ ಎಂದು ಹೇಳಲಾಗುವುದಿಲ್ಲ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
ಸಾಮಾಜಿಕ ಜಾಲತಾಣವನ್ನು  ಹೆಚ್ಚು ಬಳಕೆ ಮಾಡಿದಂತೆಲ್ಲಾ ವ್ಯವಹಾರ ಜ್ಞಾನ ಹೆಚ್ಚಿಸಿಕೊಳ್ಳುವುದು ಹಾಗೂ ಕಲಿಯುವುದು ಸಾಕಷ್ಟಿದೆ ಎಂದು ಸಂಶೋಧಕರು ಹೇಳಿದ್ದು ಅಧ್ಯಯನ ವರದಿ ಸಾಮಾಜಿಕ ಜಾಲತಾಣ ಹಾಗೂ ಪರಸ್ಪರ ಕಲಿಯುವಿಕೆ ಗೆ ಸಂಬಂಧಿಸಿದ ಅಂತಾರಾಷ್ಟ್ರೀಯ ನಿಯತಕಾಲಿಕೆಯಲ್ಲಿ ಪ್ರಕಟವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com