
ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.
ವರ್ಷದ ಎಲ್ಲಾ ದಿನಗಳಲ್ಲೂ ಸಿಗುವ ಎಳನೀರಿನಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಪ್ರತೀನಿತ್ಯ ಒಂದೊಂದು ಎಳನೀರು ಕುಡಿಯುವ ಅಭ್ಯಾಸವಿಟ್ಟುಕೊಂಡರೆ, ದೇಹಕ್ಕೆ ಎದುರಾಗುವ ಸಾಕಷ್ಟು ರೋಗಗಳಿಂದ ದೂರ ಇರಬಹುದು. ನವಿರಾದ ಸಿಹಿ, ನೀರಿನಷ್ಟೇ ಗಾಢವಾದ ಎಳನೀರು ದೇಹಕ್ಕೆ ಅಗತ್ಯವಾದ ಬಹಳಷ್ಟು ಪೋಷಕಾಂಶಗಳನ್ನು ಒದಗಿಸುತ್ತದೆ. ಎಳನೀರಿನಿಂದ ಸಿಗುವ ಪೋಷಕಾಂಶಗಳಿಂದ ದೇಹ ಶೀಘ್ರ ತನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತದೆ.
ಎಳನೀರಿನಲ್ಲಿರುವ ವಿವಿಧ ಖನಿಜ, ಸಕ್ಕರೆ ಹಾಗೂ ಲವಣಾಂಶ ಅಗತ್ಯ ಪ್ರಮಾಣದಲ್ಲಿ ಇರುವುದರಿಂದಲೇ ಇದೊಂದು ಅಮೃತಪಾನವಾಗಿದೆ. ಬೇಸಿಗೆ ತಾಪವನ್ನು ನೇರವಾಗಿ ನೀಗಿಸಬಲ್ಲ ಎಳನೀರು ದೈವದತ್ತವಾದುದು. ಸರ್ವರೋಗಕ್ಕೂ ಮದ್ದಾಗಿರುವ ಎಳನೀರಿನ ಕೆಲ ಉಪಯೋಗಗಳನ್ನು ಇಲ್ಲಿ ಇಲ್ಲಿವೆ...
ನಿಶಕ್ತಿಗೆ ಎಳನೀರು ಅತ್ಯುತ್ತಮ ಆಯ್ಕೆ, ಪ್ರತಿದಿನ ಎಳನೀರನ್ನು ಸೇವಿಸುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದಲ್ಲದೆ, ನವ ಚೈತನ್ಯ ಇರುತ್ತದೆ.
Advertisement