UPDATES: ಡಿಕೆಶಿಗೆ ಬೃಹತ್ ಬೆಂಬಲ: ಒಕ್ಕಲಿಗರು ಇನ್ನೂ ಎದ್ದಿಲ್ಲ, ಇದು ಸ್ಯಾಂಪಲ್ ಅಷ್ಟೇ; ನಂಜಾವಧೂತ ಸ್ವಾಮೀಜಿ!

ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಸಾವಿರಾರು ಮಂದಿ ಒಕ್ಕಲಿಗರು ಬುಧವಾರ ಪ್ರತಿಭಟನೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.
ನಂಜಾವಧೂತ ಸ್ವಾಮೀಜಿ
ನಂಜಾವಧೂತ ಸ್ವಾಮೀಜಿ
Updated on

ಬೆಂಗಳೂರು: ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಸಾವಿರಾರು ಮಂದಿ ಒಕ್ಕಲಿಗರು ಬುಧವಾರ ಪ್ರತಿಭಟನೆ ನಡೆಸಿ ಶಕ್ತಿ ಪ್ರದರ್ಶನ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಸ್ವಾತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದವು. ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದ ನಿಯೋಗ ಶಿವಕುಮಾರ್ ವಿರುದ್ಧ ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ದುರುದ್ದೇಶದ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಇದಕ್ಕೂ ಮುನ್ನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ಕಾಂಗ್ರೆಸ್, ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದರೆ, ಇತ್ತ ಒಕ್ಕಲಿಗ ಸಂಘದ ಸಾವಿರಾರು ಸಂಖ್ಯೆಯ  ಡಿ.ಕೆ.ಶಿವಕುಮಾರ್ ಬೆಂಬಲಿಗರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com