Live ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್ ನಲ್ಲಿ ಬಿಜೆಪಿಗೆ ಭಾರೀ ಮುನ್ನಡೆ, ಹಿಮಾಚಲ ಪ್ರದೇಶದಲ್ಲಿ ಗೆಲುವಿನತ್ತ ಕಾಂಗ್ರೆಸ್
ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ, 1995 ರಿಂದ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲನುಭವಿಸದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಗೆ ಭರ್ಜರಿ ಜಯ ಸಿಗುವ ಲಕ್ಷಣಗಳು ಸ್ಪಷ್ಟವಾಗಿವೆ.
Published: 08th December 2022 10:58 AM | Last Updated: 08th December 2022 02:25 PM | A+A A-

ಕಾರ್ಯಕರ್ತರಲ್ಲಿ ಗೆಲುವಿನ ಸಂಭ್ರಮ
ಗಾಂಧಿನಗರ/ಶಿಮ್ಲಾ: ಗುಜರಾತ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ, 1995 ರಿಂದ ರಾಜ್ಯದಲ್ಲಿ ಚುನಾವಣೆಯಲ್ಲಿ ಸೋಲನುಭವಿಸದ ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP) ಗೆ ಭರ್ಜರಿ ಜಯ ಸಿಗುವ ಲಕ್ಷಣಗಳು ಸ್ಪಷ್ಟವಾಗಿವೆ.
1985ರಲ್ಲಿ ರಾಜ್ಯದಲ್ಲಿ ಮಾಧವಸಿಂಹ ಸೋಲಂಕಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಗಳಿಸಿದ್ದ 149 ಸ್ಥಾನಗಳ ವಿಜಯವನ್ನು ಬಿಜೆಪಿ ಈ ಬಾರಿ ಸೋಲಿಸುವ ಲಕ್ಷಣಗಳು ಕಾಣುತ್ತಿವೆ. 1985ರ ನಂತರ ಹಿಮಾಚಲದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರ್ಕಾರಗಳು ಎರಡನೇ ಬಾರಿ ಅಧಿಕಾರಕ್ಕೆ ಮರಳಿಲ್ಲ. ಈ ಬಾರಿ ಕೂಡ ಅದು ಸತ್ಯವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ಕಾಂಗ್ರೆಸ್ ಬಿಜೆಪಿಗಿಂತ ಮುಂದಿದೆ.