ಕೇಂದ್ರ ಬಜೆಟ್ 2023 ಮಂಡನೆ: ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ವಿತ್ತ ಸಚಿವೆ

ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಸಂಪ್ರದಾಯ. ಅದರ ಪ್ರಕಾರ ಇಂದು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 11 ಗಂಟೆಗೆ ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಸಂಪ್ರದಾಯ. ಅದರ ಪ್ರಕಾರ ಇಂದು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 11 ಗಂಟೆಗೆ ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿ ಬದೆಟ್ ಮಂಡನೆಗೆ ಅಂಕಿತ ಪಡೆದಿದ್ದಾರೆ. 

ಇನ್ನು ಕೆಲವೇ ಹೊತ್ತಿನಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. 

ಇಂದು ಮುಂಜಾನೆ ಸೀತಾರಾಮನ್ ಅವರು ಕೇಂದ್ರ ಸಚಿವಾಲಯದ ಕಟ್ಟಡದಲ್ಲಿರುವ ನಾರ್ತ್ ಬ್ಲಾಕ್‌ನಲ್ಲಿರುವ ಹಣಕಾಸು ಸಚಿವಾಲಯಕ್ಕೆ ಭೇಟಿ ನೀಡಿದರು.  ಈ ಅವಧಿಯ ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಎಂದು ಗುರುತಿಸುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com