LIVE: 2023-24ನೇ ಸಾಲಿನ ರಾಜ್ಯ ಬಜೆಟ್: 2ನೇ ಬಾರಿ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ

2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಜೆಟ್ ಮಂಡಿಸುತ್ತಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 2ನೇ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಜೆಟ್ ಮಂಡಿಸುತ್ತಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಇಂದು ಬೆಳಿಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಆರ್ ಟಿ ನಗರದ ಮುತ್ತಪ್ಪ ಬ್ಲಾಕ್ ನ ಶ್ರೀ ಕಂಠೇಶ್ವರ ದೇವಸ್ಥಾನ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಸಮಸ್ತ ಕರ್ನಾಟಕದ ಜನತೆ ಹೆಸರಿನಲ್ಲಿ ಅರ್ಚನೆ ಮಾಡಿಸಿದ ಅವರು, ರಾಜ್ಯದ ಜನತೆಗೆ ಸುಖ ಶಾಂತಿ ನೆಮ್ಮದಿಯನ್ನು ಕರುಣಿಸಲೆಂದು ದೇವರಲ್ಲಿ ಪ್ರಾರ್ಥಿಸಿದರು.

ಬಳಿಕ ತಮ್ಮ ನಿವಾಸಕ್ಕೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಣಕಾಸು ಇಲಾಖೆಯ ಅಧಿಕಾರಿಗಳು ಬಜೆಟ್ ಪ್ರತಿಯನ್ನು ಹಸ್ತಾಂತರಿಸಿದರು.

ಈ ವೇಳೆ ಹಣಕಾಸು ಇಲಾಖೆ ಅಧಿಕಾರಿಗಳಾದ ಐ ಎಸ್ ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಬಳಿಕ ಸಚಿವ ಸಂಪುಟ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಅವರು, ರಾಜ್ಯ ಬಜೆಟ್‌ಗೆ ಒಪ್ಪಿಗೆ ಪಡೆದುಕೊಂಡರು.

ಇದೀಗ ವಿಧಾನಸಭೆಯಲ್ಲಿ 2023-2024ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಸಿಎಂ ಬೊಮ್ಮಾಯಿ ಅವರು, ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com