Live: ಕೇಂದ್ರ ಬಜೆಟ್ 2023: ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ

ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ  7ಲಕ್ಷ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ವಿಸ್ತರಿಸಿದೆ. ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ಪ್ರತಿಫಲ ಸಿಗಲೆಂದು ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತರುತ್ತಿದ್ದು, ಅದರಡಿ 7 ಲಕ್ಷದವರೆಗೆ ವೈಯಕ್ತಿಕ ಆದಾಯ ಮಿತಿಯವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಹೇ
ಲೋಕಸಭೆಯಲ್ಲಿ ಬಜೆಟ್ 2023ನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಲೋಕಸಭೆಯಲ್ಲಿ ಬಜೆಟ್ 2023ನ್ನು ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ  7ಲಕ್ಷ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ವಿಸ್ತರಿಸಿದೆ.

ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ಪ್ರತಿಫಲ ಸಿಗಲೆಂದು ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತರುತ್ತಿದ್ದು, ಅದರಡಿ 7 ಲಕ್ಷದವರೆಗೆ ವೈಯಕ್ತಿಕ ಆದಾಯ ಮಿತಿಯವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಹೇಳಿದರು. 

9 ಲಕ್ಷ ಆದಾಯದವರೆಗೆ ಶೇಕಡಾ 5ರಷ್ಟು ತೆರಿಗೆ ಮತ್ತು 15 ಲಕ್ಷ ಆದಾಯ ಹೊಂದಿರುವವರಿಗೆ ಶೇಕಡಾ 10ರಷ್ಟು ತೆರಿಗೆ ಹೇರಲಾಗುವುದು ಎಂದು ಪ್ರಕಟಿಸಿದರು. 

ಆದಾಯ ತೆರಿಗೆ ವಿನಾಯ್ತಿ, ಹೊಸ ಸ್ಲ್ಯಾಬ್​ಗಳ ವಿವರ ಹೀಗಿದೆ ಹೊಸ ತೆರಿಗೆ ಪದ್ಧತಿ (New Tax Regime) ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ತೆರಿಗೆ ವಿವರಗಳನ್ನು ನೀಡಿದರು. ವಾರ್ಷಿಕ ₹ 9 ಲಕ್ಷ ವೇತನ ಪಡೆಯುವವರು ₹ 45,000 ತೆರಿಗೆ ಕಟ್ಟುತ್ತಾರೆ ಎಂದು ಸಚಿವರು ಹೇಳಿದರು.

ಹೊಸ ತೆರಿಗೆ ದರಗಳು ಹೀಗಿವೆ: 

3 ಲಕ್ಷದವರೆಗೆ  ತೆರಿಗೆ ದರವಿಲ್ಲ,  

3ರಿಂದ 6 ಲಕ್ಷ – ಶೇ 5 

6ರಿಂದ 9 ಲಕ್ಷ – ಶೇ 10

9ರಿಂದ 12 ಲಕ್ಷ – ಶೇ 15

12ರಿಂದ 15 ಲಕ್ಷ – ಶೇ 20

 15 ಲಕ್ಷಕ್ಕೂ ಹೆಚ್ಚು – ಶೇ 30

ಇದುವರೆಗೆ 5 ಲಕ್ಷ ರೂಪಾಯಿ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ನೀಡಲಾಗುತ್ತಿತ್ತು. ಆದಾಯ ತೆರಿಗೆ ರಿಟರ್ನ್ಸ್ ಪ್ರಕ್ರಿಯೆಯ ಅವಧಿಯನ್ನು 16 ದಿನಗಳವರೆಗೆ ಕಡಿಮೆ ಮಾಡಲಾಗಿದೆ ಎಂದರು.

ಹೊಸ ತೆರಿಗೆ ಪದ್ಧತಿಯಲ್ಲಿ ಅತಿ ಹೆಚ್ಚು ಸರ್ಚಾರ್ಜ್ ದರವನ್ನು 37% ರಿಂದ 25% ಕ್ಕೆ ಇಳಿಸಲು ಸರ್ಕಾರವು ಪ್ರಸ್ತಾಪಿಸಿದೆ ಎಂದರು.ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ (Monthly income scheme - MIS) ಹೂಡಿಕೆ ಮಿತಿಯನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು 4.5 ಲಕ್ಷ ಹೂಡಿಕೆಗೆ ಮಾತ್ರ ಅವಕಾಶವಿತ್ತು.

ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷದ ಮಿತಿಯನ್ನು ಈ ಬಾರಿಯಿಂದ  30 ಲಕ್ಷಕ್ಕೆ ಕೇಂದ್ರ ಸರ್ಕಾರವು ವಿಸ್ತರಿಸಿದೆ.

ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟಿಸಿದೆ. 2 ವರ್ಷಗಳ ಅವಧಿಯ ಈ ಯೋಜನೆಗೆ ಶೇಕಡಾ 7.5 ಬಡ್ಡಿ ನಿಗದಿಪಡಿಸಲಾಗಿದೆ.

ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಲು ಸರ್ಕಾರ ಹೊಸ ಆದಾಯ ತೆರಿಗೆ ರಿಟರ್ನ್ (ITR) ಫಾರ್ಮ್‌ಗಳನ್ನು ಪರಿಚಯಿಸಿದೆ ಎಂದರು.

ಜಗತ್ತಿನಲ್ಲಿ ಅತಿ ಹೆಚ್ಚು ವೈಯಕ್ತಿಕ ತೆರಿಗೆ ದರ: ಪ್ರಸ್ತುತ ಅತಿ ಹೆಚ್ಚು ವೈಯಕ್ತಿಕ ತೆರಿಗೆ ದರ 42% ವಿಶ್ವದಲ್ಲೇ ಅತ್ಯಧಿಕವಾಗಿದೆ. ಅತಿ ಹೆಚ್ಚು ಆದಾಯ ಗಳಿಸುವವರಿಗೆ ಸರ್ಚಾರ್ಜ್ ನ್ನು 37% ರಿಂದ 25% ಕ್ಕೆ ಇಳಿಸಲಾಗಿದೆ. ಹೆಚ್ಚಿನ ತೆರಿಗೆ ದರವನ್ನು ಶೇಕಡಾ 39ಕ್ಕೆ ಇಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com