ಪ್ರಥಮ ಬಾರಿಗೆ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರಕ್ಕೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

ದೇಶದ ಇತಿಹಾಸದಲ್ಲಿಯೇ ರಾಜಕೀಯವಾಗಿ 2014 ಮರೆಯಲಾಗದ ವರ್ಷವಾಗಿತ್ತು. ಸತತ 10 ವರ್ಷಗಳಿಂದ ಅಧಿಕಾರದಿಂದ ದೂರವುಳಿದಿದ್ದ ಬಿಜೆಪಿ ಪಕ್ಷ ಒಮ್ಮೆಲೇ ತನ್ನ ಚಾರ್ಮ್ ಅನ್ನು ಬದಲಾಯಿಸಿಕೊಂಡು ಅಧಿಕೇರಿದ ವರ್ಷವಿದು. 2014ರ ಲೋಕಸಭಾ ಚುನಾವಣೆ ಇಡೀ ವಿಶ್ವಕ್ಕೆ ಪ್ರಮುಖವಾದ ವಿಚಾರವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ಮ್ಯಾಜಿಕ್ ಮಾಡಿದ ನರೇಂದ್ರ ಮೋದಿ ಅವರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು. ಮೋದಿ ಮತ್ತು ಅಮಿತ್ ಶಾ ಜುಗಲ್ ಬಂದಿ ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಅಧಿಕಾರದ ಗದ್ದುಗೆಗೇರಿಸಿತ್ತು.

ಸತತ 10 ವರ್ಷಗಳ ಕಾಲ ಅಧಿಕಾರ ಅನುಭವಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಕೆಲ ಯಡವಟ್ಟುಗಳು, ಹಗರಣಗಳು ಬಿಜೆಪಿಗೆ ವರದಾನವಾಗಿ ಪರಿಣಮಿಸಿತ್ತು. ಒಂದೆಡೆ ಅಭಿವೃದ್ಧಿ ಮಂತ್ರದೊಂದಿಗೆ, ಮೋದಿ ಅಲೆಯನ್ನು ಸೃಷ್ಟಿಸಿಕೊಂಡ ಬಿಜೆಪಿ ಜನರಲ್ಲಿದ್ದ ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡಿತು. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಲೋಕಸಭೆ ಚುನಾವಣೆಯಲ್ಲಿ ದಾಖಲೆ ಪ್ರಮಾಣದ ಮತದಾನವಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದೊಂದಿಗೆ ಜಯಭೇರಿ ಭಾರಿಸಿ, ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದರು. ಇನ್ನು ಚುನಾವಣೆಯ ಯಶಸ್ವಿಯ ರೂವಾರಿಯಾಗಿದ್ದ ಅಮಿತ್ ಶಾ ಅವರು ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಭಡ್ತಿ ಪಡೆದರು.

ಇದೇ ಯಶಸ್ಸು ಮಹಾರಾಷ್ಟ್ರ ಬಿಜೆಪಿ ಪಕ್ಷಕ್ಕೂ ವರದಾನವಾಗಿತ್ತು. ಅಕ್ಟೋಬರ್ 15ರಂದು ನಡೆದಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ 122 ಸ್ಥಾನಗಳಲ್ಲಿ ಜಯಭೇರಿ ಭಾರಿಸಿದ್ದ ಬಿಜೆಪಿ ಎನ್‌ಸಿಪಿ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಿತ್ತು. ಇದೀಗ ಬಿಜೆಪಿ ಮೈತ್ರಿ ಪಕ್ಷ ಶಿವಸೇನೆ ಬಿಜೆಪಿ ಸರ್ಕಾರ ಸೇರಿಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com