ನಿತೀಶ್ ಕುಮಾರ್ ಪುತ್ರ ನಿಶಾಂತ್ ಜೆಡಿಯು ಪಕ್ಷಕ್ಕೆ ಸೇರ್ಪಡೆ: ಕಾರ್ಯಕ್ರಮಕ್ಕೆ ಸಿಎಂ ಗೈರು
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಇಂದು ಜನತಾದಳ ಯುನೈಟೆಡ್ (JDU) ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು.


