ದೇಶ

ಇಂಟರ್ನೆಟ್, ಇ-ಮೇಲ್ ಬೇಡ: ಚೌಹಾಣ್ ವಿವಾದಿತ ಹೇಳಿಕೆ

Published On :

ಭೋಪಾಲ್: ಟೀವಿ, ಇಂಟರ್ನೆಟ್ ಮುಂದೆ ಗಂಟೆಗಟ್ಟಲೆ ಕೂರುವ ಯುವಕರಿಗೆ ಜಗತ್ತೇ ಕಾಣಿಸುವುದಿಲ್ಲ ಎನ್ನುವ ಹೇಳಿಕೆ ನೀಡುವ ಮೂಲಕ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟೀಕೆಗೆ ಗುರಿಯಾಗಿದ್ದಾರೆ. ಇಂಟರ್ನೆಟ್ ಹಾಗೂ ಟೀವಿ ಮುಂದೆ ಗಂಟೆಗಟ್ಟಲೆ ಕೂರುವುದರಿಂದ ಯುವಕರ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ. ಕಂಪ್ಯೂಟರ್ ಬಳಸುವವರಿಗೆ ಜಗತ್ತೇ ಕಾಣಿಸುವುದಿಲ್ಲ. ಹಾಗಾಗಿ ಯುವಕರು ಗರಡಿಮನೆಗಳನ್ನು ಸೇರಿಕೊಳ್ಳಿ. ಇದರಿಂದ ನಿಮ್ಮ ದೇಹ, ಮನಸ್ಸು ಸದೃಢವಾಗುತ್ತದೆ ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಸಿಂಗ್ ತಿಳಿಸಿದ್ದಾರೆ. ಗೃಹ ಸಚಿವ ಉಮಾ ಶಂಕರ್ ಗುಪ್ತಾ ಕೂಡ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿ ವಿವಾದಿತ ಹೇಳಿಕೆ ನೀಡಿದ್ದಾರೆ. ಅಧ್ಯಯನವೊಂದರ ಪ್ರಕಾರ ಶೇ. 84ರಷ್ಟು ಅತ್ಯಾಚಾರ ಪ್ರಕರಣಗಳು ಸಂಬಂಧಿಕರು, ಪರಿಚಯಸ್ಥರಿಂದಲೇ ನಡೆಯುತ್ತದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅಸಾಧ್ಯ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.