ದೇಶ

ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದು ಸಾಧುಗಳಲ್ಲ

ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದು ಸಾಧುಗಳಲ್ಲ
Published On :

ನವದೆಹಲಿ: 2014ರ ಲೋಕಸಭೆ ಚುನಾವಣೆ ವೇಳೆ ಗುಜರಾತ್ ಸಿಎಂ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಜೆಡಿಯು ನಡುವಿನ ಭಿನ್ನಾಭಿಪ್ರಾಯ ಮುಂದುವರಿದಿದೆ.
ಸಾಧುಗಳ ಕೆಲಸವಲ್ಲ: ಪ್ರಧಾನಿ ಅಭ್ಯರ್ಥಿಯನ್ನಾಗಿ ಮೋದಿ ಅವರನ್ನು ಬಿಂಬಿಸುವುದಕ್ಕೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿರುವುದು ಈಗ ಜೆಡಿಯು ಆಕ್ರೋಶಕ್ಕೆ ಕಾರಣವಾಗಿದೆ. ಎನ್‌ಡಿಎಗೆ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕೆಲಸ ರಾಜಕೀಯ ಪಕ್ಷಗಳದ್ದೇ ಹೊರತು, ಸಾಧುಗಳು ಅಥವಾ ನಾಗಾಗಳದ್ದಲ್ಲ ಎಂದು ಜೆಡಿಯು ರಾಷ್ಟ್ರೀಯ ವಕ್ತಾರ ಶಿವಾನಂದ ತಿವಾರಿ ಹೇಳಿದ್ದಾರೆ.
 ಮೋದಿ ಅವರನ್ನೇ ಪಕ್ಷವು ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ಭಾನುವಾರ ವಿಎಚ್‌ಪಿ ನಾಯಕ ಅಶೋಕ್ ಸಿಂಘಾಲ್ ಬಹಿರಂಗವಾಗಿ ಹೇಳಿದ್ದರು. ರಾಜನಾಥ್ ಸಿಂಗ್ ಅವರೂ, ಮೋದಿ ಸಮರ್ಥ ನಾಯಕ ಎಂದಿದ್ದರು. ಇದರಿಂದ ಕುಪಿತರಾದ ತಿವಾರಿ ಇಂತಹ ಮಾತುಗಳನ್ನಾಡಿದ್ದಾರೆ. ಎನ್‌ಡಿಎಯ ನೇತೃತ್ವವನ್ನು ಬಿಜೆಪಿ ವಹಿಸಿದೆ. ಹಾಗಾಗಿ ಆ ಪಕ್ಷದಿಂದಲೇ ಒಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲಾಗುವುದು. ಮಿತ್ರಪಕ್ಷಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಈ ಬಗ್ಗೆ ನಿರ್ಧರಿಸಲಾಗುತ್ತದೆ. ರಾಜಕೀಯ ಪಕ್ಷಗಳು ಈ ನಿರ್ಧಾರ ಕೈಗೊಳ್ಳುತ್ತವೆ ಎಂದಿರುವ ತಿವಾರಿ, ಪ್ರಧಾನಿ ಅಭ್ಯರ್ಥಿ ಬಗ್ಗೆ ಸಾಧುಗಳು ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ನೀವು ಈ ದೇಶದ ರಾಜಕೀಯವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
7ರಂದು ಮೋದಿ ಕುಂಭಮೇಳಕ್ಕೆ: 7ರಂದು ಮಹಾ ಕುಂಭಮೇಳದಲ್ಲಿ ವಿಎಚ್‌ಪಿ ನೇತೃತ್ವದ ಧರ್ಮ ಸಂಸದ್ ನಡೆಯಲಿದ್ದು, ಅದೇ ದಿನ ಮೋದಿ ಅವರೂ ಕುಂಭಮೇಳಕ್ಕೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಮೋದಿಗೆ ಬೆಂಬಲ ಘೋಷಿಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿಯ ಹೊಸ ಸಂಸದೀಯ ಮಂಡಳಿಯಲ್ಲಿಯೂ ಮೋದಿ ಅವರು ಸ್ಥಾನ ಪಡೆಯುವ ಸಾಧ್ಯತೆ ಅಧಿಕವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.