ಸಚಿವಾಲಯಗಳ ಬಜೆಟ್ ಶೇ.24ರಷ್ಟು ಕಡಿತ?
ನವದೆಹಲಿ: ಆರ್ಥಿಕ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವೆಚ್ಚ ಕಡಿತ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಅದರಂತೆ ವಿವಿಧ ಸಚಿವಾಲಯಗಳಿಗೆ 2013- 14ನೇ ಸಾಲಿಗೆ ಹಂಚಿಕೆ ಮಾಡಲಾಗುವ ವಾರ್ಷಿಕ ಬಜೆಟ್ನಲ್ಲಿ ಶೇ. 24ರಷ್ಟು ಕಡಿತ ಮಾಡಲು ನಿರ್ಧರಿಸಿದೆ.
ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಈ ಸಮಯದಲ್ಲಿ ಸರ್ಕಾರ ತೆಗೆದುಕೊಂಡ ಈ ನಿರ್ಧಾರಕ್ಕೆ ಹಲವು ಸಚಿವಾಲಯಗಳು ಒಪ್ಪಿಗೆ ಸೂಚಿಸಿದ್ದರೆ ಇನ್ನು ಕೆಲವು ಸಚಿವಾಲಯಗಳು ಅಸಮಾಧಾನ ವ್ಯಕ್ತಪಡಿಸಿವೆ. ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಜೈರಾಂ ರಮೇಶ್ ಅವರು ಆರ್ಥಿಕ ಕೊರತೆ ಹಿನ್ನೆಲೆಯಲ್ಲಿ ಇದು ಅನಿವಾರ್ಯ ಎಂದು ಹೇಳಿದ್ದಾರೆ. ಸರ್ಕಾರ ಹಂಚಿಕೆ ಮಾಡಿದ ಹಣದಲ್ಲೇ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಎಂದು ತಿಳಿಸಿದ್ದಾರೆ.
ಆದರೆ, ಗುಡ್ಡಗಾಡು ಜನಾಂಗಗಳ ವ್ಯವಹಾರಗಳ ಸಚಿವ ವಿ.ಕಿಶೋರ್ ಚಂದ್ರ ಅವರಿಗೆ ಮಾತ್ರ ಸರ್ಕಾರದ ಈ ನಿರ್ಧಾರ ಖುಷಿ ಕೊಟ್ಟಂತೆ ಕಾಣುತ್ತಿಲ್ಲ. ಮೊದಲೇ ಸರ್ಕಾರ ತಮ್ಮ ಸಚಿವಾಲಯಕ್ಕೆ ನೀಡುತ್ತಿರುವ ನಿಧಿ ಪ್ರಮಾಣ ಕಡಿಮೆ. ಇಂಥ ಪರಿಸ್ಥಿತಿಯಲ್ಲಿ ಈ ಅಲ್ಪ ನಿಧಿಯಲ್ಲೂ ಶೇ.24ರಷ್ಟು ಕಡಿತ ಮಾಡಿದರೆ ಯಾವುದೇ ಯೋಜನೆ ಕೈಗೆತ್ತಿಕೊಳ್ಳಲು ಅಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ತಾವು ಸಚಿವ ಚಿದಂಬರಂ, ಯೋಜನಾ ಆಯೋಗದ ಉಪಾಧ್ಯಕ್ಷ ಅಹ್ಲುವಾಲಿಯಾ ಅವರಿಗೆ ಪತ್ರವನ್ನೂ ಬರೆದಿರುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

