ದೇಶ

2ಜಿ ತನಿಖೆಗೆ ಜೆಪಿಸಿ ಅಸಮಾಧಾನ

Published On :

ನವದೆಹಲಿ: 2ಜಿ ಹಗರಣಕ್ಕೆ ಸಂಬಂಧಿಸಿ ಸಿಬಿಐ ವಿದೇಶದಲ್ಲಿ ನಡೆಸುತ್ತಿರುವ ನಿಧಾನಗತಿ ತನಿಖೆಗೆ ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ಕ್ರಿಮಿನಲ್ ಅಪರಾಧ ಸಾಬೀತುಪಡಿಸಲು ವಿವಿಧ ರಾಷ್ಟ್ರಗಳಿಗೆ ನ್ಯಾಯಾಲಯದ ಮೂಲಕ ಪತ್ರ ಕಳುಹಿಸಲಾಗಿದೆ. ಭಾರತದಲ್ಲಿ ರೇಡಿಯೋ ತರಂಗಾಂತರ ಪಡೆದ ಕಂಪನಿಗಳ ಹಣದ ಮೂಲದ ಕುರಿತು ಮಾಹಿತಿ ನೀಡುವಂತೆ  ಕೋರಲಾಗಿದೆ ಎಂದು ಸಿಬಿಐ ಕಳೆದ ವಾರ ತಿಳಿಸಿತ್ತು.  ಈ ಸಂಬಂಧ ಸಭೆ ನಡೆಸಿದ ಜೆಪಿಸಿ ನಿಧಾನಗತಿ ತನಿಖೆ ಕುರಿತು ಸಿಬಿಐ ನಿರ್ದೇಶಕ ರಂಜಿತ್ ಸಿನ್ಹಾ ಅವರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸಿಬಿಐ, ಭಾರತದಲ್ಲಿ ತನಿಖೆ ಪೂರ್ಣಗೊಂಡಿದೆ. ಆದರೆ, ವಿದೇಶದಲ್ಲಿನ ತನಿಖೆ ಬಾಕಿ ಉಳಿದಿದೆ. ಈ ಪತ್ರಕ್ಕೆ ಉತ್ತರ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.