ಗಣಿ ಗುತ್ತಿಗೆಗೆ ಆರ್ಸೆಲರ್ ಅರ್ಜಿ
ನವದೆಹಲಿ: ಗಣಿ ಗುತ್ತಿಗೆಗೆ ಹೊಸ ಅನುಮತಿ ಸ್ಥಗಿತಗೊಳಿಸಲಾಗಿದ್ದರೂ, ವಿಶ್ವದ ಅತಿ ದೊಡ್ಡ ಉಕ್ಕು ಕಂಪನಿ ಆರ್ಸೆಲರ್ ಮಿತ್ತಲ್ ಕರ್ನಾಟಕದಲ್ಲಿ ಗಣಿ ಗುತ್ತಿಗೆ ಕೋರಿ ಅರ್ಜಿ ಸಲ್ಲಿಸಿದೆ. ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಹಿನ್ನೆಲೆಯಲ್ಲಿ ಹೊಸ ಗುತ್ತಿಗೆಗೆ ಅನುಮತಿ ನೀಡುವುದನ್ನು ಸ್ಥಗಿತಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದರೂ, ಮಿತ್ತಲ್ ಕಂಪನಿ ಮಾತ್ರ ಗುತ್ತಿಗೆಗೆ ಅರ್ಜಿ ಸಲ್ಲಿಸಿದೆ. ಉಕ್ಕು ಸ್ಥಾವರ ಸ್ಥಾಪನೆಗೆ ಭೂಸ್ವಾಧೀನಕ್ಕೆ ಸಂಬಂಧಿಸಿದ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. 2,659 ಎಕರೆ ಖಾಸಗಿ ಭೂಮಿಗಾಗಿ ಸ್ವಾಧೀನ ಪತ್ರವೂ ದೊರೆತಿದೆ. ಇನ್ನುಳಿದ 136 ಎಕರೆ ಸರ್ಕಾರದ ಬಳಿ ಇದೆ ಎಂದು ಕಂಪನಿ ಹೇಳಿದೆ. ಜತೆಗೆ, ನಮ್ಮ ಪ್ರಾಜೆಕ್ಟ್ಗಾಗಿ ತುಂಗಭದ್ರಾ ನದಿಯಿಂದ ನೀರು ಬಳಸಿಕೊಳ್ಳಲೂ ಸರ್ಕಾರ ಒಪ್ಪಿಗೆ ನೀಡಿದೆ ಆದರೆ, ಅದರ ಗುತ್ತಿಗೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದೂ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

