ಕೋಲ್ಕತಾ ಬೆಂಕಿ: 20 ಸಾವು

ಕೋಲ್ಕತಾ: ಐದು ಅಂತಸ್ತುಗಳ ಕಟ್ಟಡದಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತದಲ್ಲಿ 20 ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ಇಲ್ಲಿನ 25 ವರ್ಷ ಹಳೆಯದಾದ ಸೂರ್ಯ ಸೇನ್ ಮಾರುಕಟ್ಟೆಯಲ್ಲಿ ಸಂಭವಿಸಿದೆ.
ಬುಧವಾರ ಬೆಳಗಿನ ಜಾವ 3.30ರ ಹೊತ್ತಿಗೆ ಹತ್ತಿಕೊಂಡ ಬೆಂಕಿ ಇಡೀ ಕಟ್ಟಡವನ್ನೇ ಆವರಿಸಿದೆ. ಮೃತಪಟ್ಟವರಲ್ಲಿ ಅನೇಕರು ಮಾರುಕಟ್ಟೆಯ ಕಾರ್ಮಿಕರು. ಇಡೀ ಕಟ್ಟಡಕ್ಕೆ ಒಳಹೋಗಲು ಮತ್ತು ಹೊರಬರಲು ಒಂದೇ ದಾರಿ ಇದ್ದಿದ್ದರಿಂದ ಭಾರಿ ಪ್ರಮಾಣದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ತುರ್ತು ನಿರ್ಗಮನ ವ್ಯವಸ್ಥೆಯೂ ಕೂಡ ಒಂದೇ ಇದ್ದು, ಇದನ್ನು ಕಳೆದ 15 ವರ್ಷಗಳಿಂದ ಉಪಯೋಗಿಸದೇ ಇದ್ದುದರಿಂದ ಈ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳನ್ನು ತುಂಬಲಾಗಿತ್ತು.
ಈ ಕಾರಣದಿಂದಾಗಿಯೂ ಹೆಚ್ಚಿನ ಸಾವುನೋವುಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕಟ್ಟಡವು ಸೆಲ್ಡಾ ಪ್ರದೇಶದಲ್ಲಿದ್ದು, ವಸತಿ ಮತ್ತು ವಾಣಿಜ್ಯ ಸಂಕೀರ್ಣವಾಗಿತ್ತು. ಕಟ್ಟಡದ ಇತರೆ ಮಹಡಿಗಳಿಗೆ ಹೋಗಲು ಇದ್ದ ಮೆಟ್ಟಿಲುಗಳಲ್ಲಿ ಪ್ಲಾಸ್ಟಿಕ್, ಬಟ್ಟೆ ಮತ್ತು ಪೇಪರ್ಗಳನ್ನು ಹಾಕಲಾಗಿತ್ತು. ಅಲ್ಲದೆ ಕೆಳ ಎರಡು ಮಹಡಿಗಳಲ್ಲಿ ಇಂಥ ವಸ್ತುಗಳನ್ನೇ ಹೆಚ್ಚಾಗಿ ತುಂಬುವ ಸಲುವಾಗಿ ಗೋಡೌನ್ ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಈ ಕಟ್ಟಡದಲ್ಲಿ ಸುಮಾರು 200 ಅಂಗಡಿಗಳಿದ್ದವು ಎಂದು ಅವರು ತಿಳಿಸಿದ್ದಾರೆ.
ಹೇಗೆ ಬೆಂಕಿ ಹತ್ತಿಕೊಂಡಿತು ಎಂಬ ಬಗ್ಗೆ ಇನ್ನೂ ಗೊತ್ತಾಗಿಲ್ಲ. ಆದರೆ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ಅನಾಹುತವಾಗಿರಬಹುದು ಎಂದು ಶಂಕಿಸಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ಅವರು ಬುಧವಾರ ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಪಟ್ಟವರ ಕುಟುಂಬಗಳಿಗೆ 2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


