ರಾಜ್ಠಾಕ್ರೆ ಬೆಂಗಾವಲು ಪಡೆ ಮೇಲೆ ದಾಳಿ: ಮುಂಬೈ ಉದ್ವಿಗ್ನ
ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ...

ಮುಂಬೈ: ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ಠಾಕ್ರೆ ಬೆಂಗಾವಲುಪಡೆ ಮೇಲಿನ ದಾಳಿ ಹಿನ್ನೆಲೆಯಲ್ಲಿ ಎಂಎನ್ಎಸ್ ಹಾಗೂ ಎನ್ಸಿಪಿ ಕಾರ್ಯಕರ್ತರ ನಡುವೆ ಬುಧವಾರ ಅಲ್ಲಲ್ಲಿ ಘರ್ಷಣೆ ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ಮುಂಬೈ, ಠಾಣೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಕುರ್ಲಾ, ಚೆಂಬೂರು ಮತ್ತು ಬಾಂದ್ರಾದ ಹಲವೆಡೆ ಕಲ್ಲುತೂರಾಟದ ಘಟನೆಗಳು ಸಂಭವಿಸಿವೆ. ಅಂಬೆರ್ನಾಥ್ನಲ್ಲಿ ಎನ್ಸಿಪಿ ಕಚೇರಿ ಮೇಲೆ ದಾಳಿ ನಡೆಸಿರುವ ಎಂಎನ್ಎಸ್ ಕಾರ್ಯಕರ್ತರು, ಮುಂಬೈ- ಪುಣೆ ಹೆದ್ದಾರಿ ಬಂದ್ ಮಾಡಿದ್ದಾರೆ. ಕುರ್ಲಾದಲ್ಲಿ ಕಾರ್ವೊಂದಕ್ಕೆ ಬೆಂಕಿ ಇಟ್ಟಿದ್ದಾರೆ.
ಎಂಎನ್ಎಸ್ ಮುಖ್ಯಸ್ಥ ರಾಜ್ಠಾಕ್ರೆ ಅವರ ಬೆಂಗಾವಲು ಪಡೆಯ ಮೇಲೆ ಅಹಮದ್ನಗರ ಜಿಲ್ಲೆಯ ಭಿಂಗಾರ್ನಲ್ಲಿ ಮಂಗಳವಾರ ರಾತ್ರಿ ಎನ್ಸಿಪಿ ಕಾರ್ಯಕರ್ತರೆಂದು ಹೇಳಲಾಗಿರುವ ಹಲವರು ಕಲ್ಲುತೂರಿದ್ದರು.
ಎನ್ಸಿಪಿ ಮುಖ್ಯಸ್ಥ ಶರದ್ಯಾದವ್ ವಿರುದ್ಧ ಟೀಕೆಗೆ ಪ್ರತೀಕಾರವಾಗಿ ಈ ಕಲ್ಲುತೂರಾಟ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯಿಂದಲೇ ಎಂಎನ್ಎಸ್ ಕಾರ್ಯಕರ್ತರು ಎನ್ಸಿಪಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


