ದೇಶ

ಭ್ರಷ್ಟಾಚಾರ ಹೆಚ್ಚಲು ದಲಿತರು ಕಾರಣ...

ಭ್ರಷ್ಟಾಚಾರ ಹೆಚ್ಚಲು ದಲಿತರು ಕಾರಣ...
Published On :

ಜೈಪುರ/ನವದೆಹಲಿ: ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಲು ದಲಿತರು, ಬುಡಕಟ್ಟು ಜನಾಂಗಕ್ಕೆ ಸೇರಿದವರು ಮತ್ತು ಹಿಂದುಳಿದ ವರ್ಗದವರೇ ಕಾರಣ, ಇವರಲ್ಲೇ ಭ್ರಷ್ಟಾಚಾರಿಗಳು ಹೆಚ್ಚು. ಆದರೆ ಮೇಲ್ಜಾತಿಯವರಲ್ಲಿ ಭ್ರಷ್ಟಾಚಾರ ಕಡಿಮೆ ಎಂದು ಹೇಳುವ ಮೂಲಕ ಲೇಖಕ, ಸಮಾಜಶಾಸ್ತ್ರಜ್ಞ ಆಶೀಶ್ ನಂದಿ ವಿವಾದ ಸೃಷ್ಟಿಸಿದ್ದಾರೆ.
ವಿವಾದಗಳಿಂದಲೇ ಆರಂಭವಾಗಿರುವ ಜೈಪುರ ಸಾಹಿತ್ಯೋತ್ಸವದಲ್ಲಿ ಮಾತನಾಡುತ್ತಿದ್ದ ಅವರು, ಇಂಥ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಆಶೀಶ್ ನಂದಿ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಅಷ್ಟೇ ಅಲ್ಲ ಜಾತಿನಿಂದನೆ ಪ್ರಕರಣದಡಿ ಅವರ ವಿರುದ್ಧ ಕೇಸ್ ಕೂಡ ದಾಖಲಾಗಿದೆ.  ಇವರಲ್ಲೇ ಭ್ರಷ್ಟರು ಹೆಚ್ಚು ಎಂಬುದಕ್ಕೆ ಅವರೊಂದು ಉದಾಹರಣೆಯನ್ನೂ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಳೆದ 100 ವರ್ಷಗಳ ಕಾಲ ಕಮ್ಯೂನಿಸ್ಟರೇ ಅಧಿಕಾರ ನಡೆಸುತ್ತಿದ್ದಾರೆ. ಇವರು ದಲಿತರಿಗಾಗಲಿ, ಹಿಂದುಳಿದ ವರ್ಗದವರಿಗಾಗಲಿ ಅಧಿಕಾರ ನಡೆಸಲು ಅವಕಾಶ ಕೊಟ್ಟಿಲ್ಲ. ಹೀಗಾಗಿ ಆ ರಾಜ್ಯ ಕ್ಲೀನ್ ಇಮೇಜ್ ಉಳಿಸಿಕೊಂಡಿದೆ ಎಂದು ಬಡಾಬಡಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.