ತೆಲಂಗಾಣ: ತೀರ್ಮಾನ ಸದ್ಯಕ್ಕಿಲ್ಲ

ಹೈದರಾಬಾದ್: ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆ ಬೇಡಿಕೆ ಕುರಿತು ಅಂತಿಮ ನಿರ್ಧಾರ ಇನ್ನಷ್ಟು ವಿಳಂಬವಾಗಲಿದೆ. ಈ ಕುರಿತು ಒಮ್ಮತಕ್ಕೆ ಬರಲು ಮತ್ತಷ್ಟು ಕಾಲಾವಕಾಶದ ಅಗತ್ಯ ಇದೆ ಎಂದು ಸರ್ಕಾರ, ಕಾಂಗ್ರೆಸ್ ತಿಳಿಸಿದೆ.
ತೆಲಂಗಾಣ ರಾಜ್ಯ ರಚನೆ ಸಂಬಂಧ ವಿವಿಧ ಮುಖಂಡರ ಅಭಿಪ್ರಾಯ ಪಡೆಯುವ ಪ್ರಕ್ರಿಯೆ ಮುಂದುವರಿದಿದೆ. ಎಲ್ಲರ ಅಭಿಪ್ರಾಯ ಪಡೆದ ಬಳಿಕವೇ ಈ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ್ರದಲ್ಲಿ ಪಕ್ಷದ ಉಸ್ತುವಾರಿಯೂ ಆಗಿರುವ ಗುಲಾಂ ನಬಿ ಆಜಾದ್ ಕೂಡ ಆಂಧ್ರದ ಮೂರೂ ಭಾಗಗಳ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಅಗತ್ಯ ಇದೆ ಎಂದಿದ್ದಾರೆ. ಸಚಿವ ಶಿಂಧೆ ಅವರು ಡಿ. 23ರಂದು ತೆಲಂಗಾಣ ಕುರಿತು ಜನವರಿ ಅಂತ್ಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು. ಹೋರಾಟ ಇನ್ನಷ್ಟು ತೀವ್ರ: ಈ ನಡುವೆ, ಪ್ರತ್ಯೇಕ ತೆಲಂಗಾಣದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ತೆಲಂಗಾಣ ಪರ ಹೋರಾಟಗಾರರು ನಿರ್ಧರಿಸಿದ್ದಾರೆ. ರಾಜ್ಯ ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲು ಭಾನುವಾರದಿಂದ 36 ಗಂಟೆಗಳ ಸಮರ ದೀಕ್ಷೆ(ಪ್ರತಿಭಟನೆ) ತೆಗೆದುಕೊಂಡಿದ್ದಾರೆ. ಇದಕ್ಕೂ ಮೊದಲು ಭಾನುವಾರ ಹೈದರಾಬಾದ್ನ ಹಲವೆಡೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಟಿಆರ್ಎಸ್ ಶಾಸಕ ಕೆ.ಟಿ. ರಾಮ ರಾವ್ ಮತ್ತಿತರರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


