'ತಾಜ್ಮಹಲ್ಗಾಗಿ ಕೋಟಿಗಟ್ಟಲೆ ವೆಚ್ಚ ಮಾಡಬೇಕಿತ್ತೇ?'
ಲಖನೌ: ಜಗತ್ತಿನ ಏಳು ಅದ್ಭುತಗಳಲ್ಲೊಂದಾದ ತಾಜ್ಮಹಲ್ನ ಸೌಂದರ್ಯವನ್ನು ಇಡೀ ವಿಶ್ವವೇ ಕೊಂಡಾಡಿರಬಹುದು. ಆದರೆ, ಉತ್ತರ ಪ್ರದೇಶದ ನಗರಾಭಿವೃದ್ಧಿ ಸಚಿವ ಅಜಂ ಖಾನ್ ಮಾತ್ರ ಇಂಥದ್ದೊಂದು ಸ್ಮಾರಕದ ಅಗತ್ಯತೆಯನ್ನೇ ಪ್ರಶ್ನಿಸಿದ್ದಾರೆ. ಷಹಜಹಾನ್ಗೆ ಸಾರ್ವಜನಿಕರ ಕೋಟಿಗಟ್ಟಲೆ ಹಣವನ್ನು ಪ್ರಿಯತಮೆಯ ಸ್ಮಾರಕಕ್ಕೆ ವೆಚ್ಚ ಮಾಡುವ ಅಗತ್ಯವೇ ಇರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಜಾಫರ್ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು 17ನೇ ಶತಮಾನದ ಈ ಕಟ್ಟಡ ಹಾಗೂ ಮಾಯಾವತಿ ನಿರ್ಮಿಸಿದ ಪ್ರತಿಮೆಗಳನ್ನು ಹೋಲಿಕೆ ಮಾಡುವಾಗ ಇಂಥದ್ದೊಂದು ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಬಾಬರಿ ಮಸೀದಿ ಬದಲು ತಾಜ್ಮಹಲ್ ಅನ್ನು ನೆಲಸಮ ಮಾಡಲು ಜನ ಬಯಸಿದರೆ ನಾನೇ ಅದರ ನೇತೃತ್ವ ವಹಿಸುತ್ತೇನೆ ಎಂದು ಖಾನ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

