ದೇಶ

ಕಳ್ಳಗಿವಿ: ಆರೋಪಿಗೆ ಬಿಜೆಪಿ ನಾಯಕನ ಜತೆ ಸಂಪರ್ಕ

Published On :

ನವದೆಹಲಿ: ಅರುಣ್ ಜೇಟ್ಲಿ ಅವರ ಫೋನ್ ಕದ್ದಾಲಿಕೆ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ನಾಯಕರೊಬ್ಬರೊಂದಿಗೆ ನಿರಂತರ ಸಂಕರ್ಪದಲ್ಲಿದ್ದ ಎಂಬ ವಿಷಯ ಈಗ ಬಹಿರಂಗಗೊಂಡಿದೆ.
 ಕಳ್ಳಗಿವಿ ಪ್ರಕರಣ ಸಂಬಂಧ ಬಂಧಿತರಾದ ನಾಲ್ವರಲ್ಲಿ ಒಬ್ಬನಾದ ಅನುರಾಗ್ ಸಿಂಗ್ ಬಿಜೆಪಿ ನಾಯಕ ಸುಧಾಂಶು ಮಿತ್ತಲ್ ಜತೆಗೆ ಸಂಪರ್ಕದಲ್ಲಿದ್ದ ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸುಧಾಂಶು ಅವರ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅನುರಾಗ್ ಮತ್ತು ಆತನ ಸಹಚರರು  ಬಿಜೆಪಿ ನಾಯಕರ ಫೋನ್ ಕದ್ದಾಲಿಕೆಗೆ ಮಾತ್ರ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ವಶಪಡಿಸಿಕೊಂಡಿರುವ ಹಾರ್ಡ್ ಡಿಸ್ಕ್ ಮೂಲಕ ಹೆಚ್ಚಿನ ಮಾಹಿತಿ ಬಹಿರಂಗವಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.