ದೇಶ

ಮೋದಿಗೆ ಕೊಟ್ಟ ಆಹ್ವಾನ ರದ್ದು

Published On :

ನವದಹೆಲಿ: ಈ ತಿಂಗಳ 23ರಂದು ಪೆನ್ಸಿಲ್ವೇನಿಯಾ ವಿವಿಯ ವಾರ್ಟನ್ ಸ್ಕೂಲ್‌ನಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮಾಡಬೇಕಾಗಿದ್ದ ಭಾಷಣ ರದ್ದಾಗಿದೆ. ಮೋದಿಯವರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲು ಆಹ್ವಾನಿಸಿದ್ದಕ್ಕೆ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ವಿವಿ ಭಾನುವಾರ ಮೋದಿಯವರಿಗೆ ನೀಡಿದ್ದ ಆಹ್ವಾನವನ್ನು ರದ್ದುಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿದ ವಾರ್ಟನ್ ಇಂಡಿಯಾ ಇಕನಾಮಿಕ್ ಫೋರಂ 'ನಾವು ಯಾವುದೇ ರಾಜಕೀಯ ಅಭಿಮತ ಅಥವಾ ಇತರ ಸಿದ್ಧಾಂತವನ್ನು ಬೆಂಬಲಿಸುವುದಿಲ್ಲ. ನಮ್ಮ ತಂಡದ ಗುರಿ ಏನಿದ್ದರೂ ಭಾರತದ ಅಭಿವೃದ್ಧಿ ವೇಗದ ಬಗ್ಗೆ ಮಾತ್ರ ಚರ್ಚೆ ಮಾಡಲು ಇಚ್ಛಿಸುತ್ತೇವೆ' ಎಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.