

ಬೆಂಗಳೂರು: ಖಾಸಗಿ ಬಸ್‌ಗೆ ಬೆಂಕಿ ತಗುಲಿ ಮೂವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೆಆರ್ ಪುರಂನಲ್ಲಿ ಮಂಗಳವಾರ ನಡೆದಿದೆ.
ಕೋಲಾರದಿಂದ ಬೆಂಗಳೂರಿಗೆ ಬರುತ್ತಿದ್ದ ಶ್ರೀ ವೆಂಕಟೇಶ್ವರ ಟ್ರಾವೆಲ್ಸ್‌ಗೆ ಸೇರಿದ ಬಸ್ ಕೆಆರ್ ಪುರಂ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಪಲ್ಸರ್ ಬೈಕಿಗೆ ಡಿಕ್ಕಿ ಹೊಡೆದು ಬಳಿಕ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ನಲ್ಲಿದ್ದ ಮೂವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ.
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಡೀಸೆಲ್ ಟ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿಯ ಕೆನ್ನಾಲಿಗೆ ಇಡೀ ಬಸ್‌ಗೆ ತಗುಲಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ಬಸ್‌ನಲ್ಲಿ ಬೆಂಕಿ ಹೊತ್ತು ಉರಿಯುತ್ತಿದ್ದು, ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ