2ನೇ ಹಂತ: ಕಣಿವೆ ರಾಜ್ಯದಲ್ಲಿ ಬಿಗಿಭದ್ರತೆಯೊಂದಿಗೆ ಮತದಾನ

ಭಾರಿ ಭದ್ರತೆಯೊಂದಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಮಂಗಳವಾರ..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಶ್ರೀನಗರ: ಭಾರಿ ಭದ್ರತೆಯೊಂದಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಎರಡನೇ ಹಂತದ ಮತದಾನ ಮಂಗಳವಾರ ಬೆಳಗ್ಗೆಯಿಂದ ಆರಂಭವಾಗಿದ್ದು, ಒಟ್ಟು 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಮೂವರು ಹಾಲಿ ಸಚಿವರು ಸೇರಿದಂತೆ ಒಟ್ಟು 175 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ನಡೆಯಲಿದ್ದು, 2181 ಮತಗಟ್ಟೆಗಳಲ್ಲಿ ಸುಮಾರು 15 ಲಕ್ಷ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.

ಈಚೆಗೆ ಶ್ರೀನಗರದಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿ ಹಿನ್ನೆಲೆಯಲ್ಲಿ ಇಂದಿನ ಮತದಾನಕ್ಕೆ ಬಿಗಿಭದ್ರತೆ ಕಲ್ಪಿಸಲಾಗಿದೆ. ಇನ್ನು ಜಾರ್ಖಂಡ್ನಲ್ಲೂ ನಕ್ಸಲ್ ಪೀಡಿತ ಪ್ರದೇಶಗಳು ಸೇರಿ ಒಟ್ಟು 20 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com