ಜಾರಿ ಬಿದ್ದ ಶರದ್ ಪವಾರ್‌ಗೆ ಗಾಯ, ಆಸ್ಪತ್ರೆಗೆ ದಾಖಲು

ಶರದ್ ಪವಾರ್
ಶರದ್ ಪವಾರ್
Updated on: 

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಬುಧವಾರ ಬೆಳಗ್ಗೆ ವಾಕ್ ಮಾಡುವಾಗ ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.

73 ವರ್ಷದ ಪವಾರ್ ಇಂದು ಬೆಳಗ್ಗೆ ತಮ್ಮ ಮನೆಯ ಗಾರ್ಡ್‌ನಲ್ಲಿ ವಾಕ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದ ಪರಿಣಾಮ ಅವರ ಕಾಲಿಗೆ ಗಾಯವಾಗಿದೆ ಮತ್ತು ಬೆನ್ನಿನಲ್ಲಿ ನೋವು ಕಾಣಿಸಿಕೊಂಡಿದ್ದು, ಅವರನ್ನು ಮುಂಬೈನ ಬ್ರಿಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸದ್ಯ ಪವಾರ್ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಪವಾರ್ ಅವರು 1999ರಲ್ಲಿ ಕಾಂಗ್ರೆಸ್ ತೊರೆದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ವನ್ನು ಸ್ಥಾಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com