ಡಿ. 5ಕ್ಕೆ "ಮಹಾ" ಸಚಿವ ಸಂಪುಟ ವಿಸ್ತರಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್...
Updated on: 

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಶುಕ್ರವಾರ ನಡೆಯಲಿದೆ.

ಬಿಜೆಪಿ ಹಾಗೂ ಶಿವಸೇನೆ ನಡುವೆ ಇದ್ದ ಬಿಕ್ಕಟ್ಟು ಬಗೆಹರಿದ ಬೆನ್ನಲ್ಲೇ ಫಡ್ನವೀಸ್ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಸಮಾರಂಭವು ಮಹಾರಾಷ್ಟ್ರದ ವಿಧಾನ ಭವನದಲ್ಲಿ ಸಂಜೆ 4 ಗಂಟೆಗೆ ನಡೆಯಲಿದೆ.

ಪ್ರಸ್ತುತ ಸಂಪುಟದಲ್ಲ 8 ಕ್ಯಾಬಿನೆಟ್ ಸ್ಥಾನಗಳು ಖಾಲಿಯಿದೆ. ಶಿವಸೇನೆಯಿಂದ 7 ರಿಂದ 12 ಸದಸ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಂಭವವಿದೆ. ಸಚಿವ ಸಂಪುಟ ವಿಸ್ತರಣೆಯಿಂದ ಪಕ್ಷದ ವತಿಯಿಂದ ಮತ್ತಷ್ಟು ಉತ್ತಮ ಕಾರ್ಯಗಳು ಹೊರಹೊಮ್ಮುವ ವಿಶ್ವಾಸವಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com