
ಮಾವು(ಉತ್ತರಪ್ರದೇಶ): ಶಾಲಾ ಮಕ್ಕಳ ಬಸ್‌ವೊಂದು ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಶಾಲಾ ಮಕ್ಕಳು ಅಸುನೀಗಿದ್ದಾರೆ.
ಶಾಲಾ ಮಕ್ಕಳನ್ನು ಕರೆದೋಯ್ಯುತ್ತಿದ್ದ ಶಾಲಾ ಬಸ್‌ವೊಂದು ಉತ್ತರಪ್ರದೇಶದ ಮಾವು ಜಿಲ್ಲೆ ಬಳಿ ಇರುವ ಲೆವೆಲ್ ಕ್ರಾಸಿಂಗ್ ಹತ್ತಿರ ಚಾಲನಕ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಮಕ್ಕಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement