ಭಾರತೀಯ ಸೇನಾ ಕ್ಯಾಂಪ್‌ಗೆ ನುಗ್ಗಿದ ಉಗ್ರರಿಂದ ಗುಂಡಿನ ದಾಳಿ: 8 ಸಾವು

ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್‌ಗೆ ನುಗ್ಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು...
ಭಾರತೀಯ ಯೋಧರು
ಭಾರತೀಯ ಯೋಧರು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್‌ಗೆ ನುಗ್ಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ಯೋಧರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ.

ಭಾರಿ ಶಸ್ತ್ರಸ್ತ್ರಗಳನ್ನು ಹೊಂದಿದ್ದ ಉಗ್ರರು ಶುಕ್ರವಾರ ಬೆಳಗ್ಗೆ ಬರಮುಲ್ಲಾ ಜಿಲ್ಲೆಯ ಉರಿ ಎಂಬಲ್ಲಿ ಭಾರತೀಯ ಸೇನಾ ಕ್ಯಾಂಪ್‌ಗೆ ನುಗ್ಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಯೋಧರು, ಇಬ್ಬರು ಪೊಲೀಸ್ ಅಧಿಕಾರಿಗಳು ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಉರಿ ವಲಯದಲ್ಲಿರುವ ಸೇನಾ ಕ್ಯಾಂಪ್‌ಗೆ ನುಗ್ಗಿದ ಉಗ್ರರು ಯೋಧರ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತೀಯ ಯೋಧರು ಸಹ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರ ಗುಂಡಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.

ಸದ್ಯ ಸೇನಾ ಕ್ಯಾಂಪ್‌ನಲ್ಲಿ ಗುಂಡಿನ ಚಕಮಕಿ ನಿಂತಿದ್ದು, ಉಗ್ರರಿಗಾಗಿ ಯೋಧರು ತೀವ್ರ ಶೋಧ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com