

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಬುಧವಾರ ಬೆಳಗ್ಗೆ ವಾಕ್ ಮಾಡುವಾಗ ಜಾರಿ ಬಿದ್ದು ಗಾಯಗೊಂಡಿದ್ದ ಪವಾರ್ ಆವರನ್ನು ಏರ್ ಆಂಬುಲೆನ್ಸ್ ಮೂಲಕ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಪವಾರ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ತಿಳಿಸಿದ್ದಾರೆ.