ಡಿ.10 ರಂದು ಭಾರತಕ್ಕೆ ಪುಟಿನ್ ಭೇಟಿ

10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ಭೇಟಿ...
ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್
ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್
Updated on

ನವದೆಹಲಿ: ಡಿಸೆಂಬರ್ 10ರಂದು  ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್, ಭಾರತಕ್ಕೆ ಆಗಮಿಸುವುದರ ಬಗ್ಗೆ ವಿದೇಶಾಂಗ ಸಚಿವಾಲಯ ಖಚಿತ ಪಡಿಸಿದೆ.

ಮುಂಬರುವ ಡಿಸೆಂಬರ್ 10 ಮತ್ತು 11 ರಂದು 15ನೇ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನಕ್ಕೆ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಈ ಭೇಟಿಯ ವೇಳೆ ಉಭಯ ದೇಶಗಳ ನಡುವಿನ ಅಣುಶಕ್ತಿ ಸಂಬಂಧಿತ ವಿಚಾರ ಸೇರಿದಂತೆ ಮಹತ್ವದ ವಿಷಯಗಳ ಕುರಿತು ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳಿವೆ. ಅಲ್ಲದೆ ಉಭಯದ ದೇಶಗಳ ಸೌಹಾರ್ದಯುತ ಸಂಬಂಧವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ವಜ್ರ ಉದ್ಯಮಕ್ಕೆ ಸಂಬಂಧಿತ ಒಪ್ಪಂದಕ್ಕೂ ಸಹಿ ಹಾಕಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಭೇಟಿಯ ಸಂದರ್ಭದಲ್ಲಿ ಪುಟಿನ್ ಸಂಸತ್ ಕಲಾಪದಲ್ಲೂ ಭಾಗವಹಿ ವಿಶೇಷ ಭಾಷಣ ಮಾಡಲಿದ್ದಾರೆ. ಈ ಹಿಂದೆ 2010ರಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಸಹಾ ದೇಶದ ಸಂಸತ್ತಿನ ಚಳಿಗಾಲದ ವಿಶೇಷ ಅಧಿವೇಶನದಲ್ಲಿ ಭಾಗವಹಿಸಿ ಭಾಷಣ ಮಾಡಿದ್ದರು.

ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಪ್ರಪ್ರಥಮವಾಗಿ ಬ್ರಿಕ್ಸ್ ಸಮಾವೇಶದಲ್ಲಿ ಭಾಗವಹಿಸಿದ್ದ ವೇಳೆ, ಪುಟಿನ್ ಅವರನ್ನು ಭೇಟಿ ಮಾಡಿ ಭಾರತಕ್ಕೆ ಆಹ್ವಾನಿಸಿದ್ದರು.

ಮೋದಿ ಅವರ ಆಹ್ವಾನವನ್ನು ಪುಟಿನ್ ಸ್ವೀಕರಿಸಿದ್ದು, ಭಾರತಕ್ಕೆ ಭೇಟಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ.

2 ದಿನಗಳ ಭೇಟಿಯ ವೇಳೆ ಭಾರತದ ಪ್ರಮುಖ ಪ್ರವಾಸಿ ತಾಣಗಳನ್ನು ಪುಟಿನ್ ವೀಕ್ಷಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com