

ಬೆಂಗಳೂರು: ಭಾರತೀಯ ನೌಕಾಪಡೆ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪವನ್(28) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಭಾರತೀಯ ನೌಕಾಪಡೆಯಲ್ಲಿ ವೈದ್ಯಕೀಯ ಸಹಾಯಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪವನ್ ನಿನ್ನೆ ರಾತ್ರಿ ಇಂಜೆಕ್ಷನ್ ಮೂಲಕ ವಿಷಪ್ರಾಶನ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಪವನ್ ಡೆತ್‌ನೋಟ್ ಬರೆದಿದ್ದು, ಸಾವಿಗೆ ಕಾರಣ ತಿಳಿಸಿಲ್ಲ ಆದರೆ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡುವಂತೆ ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಯರಗನಹಳ್ಳಿ ಪೊಲೀಸರು ದೇಹವನ್ನು ಸ್ಥಳೀಯ ಆಸ್ಪತ್ರೆಗೆ ಶವ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ.