ಮೋದಿ ಶ್ರೀನಗರ ರ್ಯಾಲಿಗೆ 4 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ...
ನರೇಂದ್ರ ಮೋದಿ (ಸಂಗ್ರಹ ಚಿತ್ರ)
ನರೇಂದ್ರ ಮೋದಿ (ಸಂಗ್ರಹ ಚಿತ್ರ)

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಂದಿನ ರ್ಯಾಲಿಗೆ ಭಾರಿ ಭದ್ರತೆ ಒದಗಿಸಲಾಗಿದೆ.

ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂ ಸುತ್ತಲೂ ಸುಮಾರು 4 ಸಾವಿರ ಭದ್ರತಾ ಸಿಬ್ಬಂದಿಯನ್ನು ನೇಮಿಸಲಾಗಿದೆ.

ಪ್ರಧಾನಿಯವರ ಚೊಚ್ಚಲ ಚುನಾವಣಾ ರ್ಯಾಲಿಗೆ ಯಾವುದೇ ರೀತಿಯ ಭದ್ರತಾ ಲೋಪ ಉಂಟಾಗದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಶೇಷವಾಗಿ ಕಳೆದ ಶುಕ್ರವಾರದ ಉಗ್ರರ ದಾಳಿಯ ನಂತರ ಕಣಿವೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಪ್ರಧಾನಮಂತ್ರಿಗಳ ಇಂದಿನ ಸಾರ್ವಜನಿಕ ಸಭೆಗೂ ಹೆಚ್ಚಿನ ಭದ್ರತೆ ನೀಡಲಾಗಿದೆ.

ರಾಜ್ಯ ಮತ್ತು ಕೇಂದ್ರ ರಕ್ಷಣಾ ಪಡೆಯ 4 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ಸ್ಟೇಡಿಯಂ ಸುತ್ತಲೂ ನಿಯೋಜಿಸಲಾಗಿದೆ ಮತ್ತು ಹೆಲಿಕಾಪ್ಟರ್ ಮೂಲಕ ಸ್ಟೇಡಿಯಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com