ಕರ್ನಾಟಕ ಸೇರಿ 3 ರಾಜ್ಯಗಳ ಮೇಲೆ ದಾಳಿಗೆ ಉಗ್ರರ ಸಂಚು!

ಮಧ್ಯಪ್ರದೇಶದ ಜೈಲಿನಿಂದ ತಪ್ಪಿಸಿಕೊಂಡಿದ್ದ ಐವರು ಉಗ್ರರು ದೇಶದ ಪ್ರಮುಖ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಮಧ್ಯಪ್ರದೇಶದ ಜೈಲಿನಿಂದ ತಪ್ಪಿಸಿಕೊಂಡಿದ್ದ ಐವರು ಉಗ್ರರು ದೇಶದ ಪ್ರಮುಖ ರಾಜ್ಯಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಕಳೆದ ವರ್ಷ ಮಧ್ಯಪ್ರದೇಶದ ಜೈಲಿನಿಂದ ತಪ್ಪಿಸಿಕೊಂಡಿದ್ದ 5 ಉಗ್ರರು, ದೇಶದ ಪ್ರಮುಖ ರಾಜ್ಯಗಳ ಮೇಲೆ ದಾಳಿಗೆ ಸಂಚು ರೂಪಿಸಿದ್ದು, ದೇಶಾದ್ಯಂತ ಕಟ್ಟೆಚ್ಚರಕ್ಕೆ ಆದೇಶಿಸಲಾಗಿದೆ.

ವರಿದಿಗಳ ಪ್ರಕಾರ, ರಾಜಸ್ಥಾನ, ಮಹಾರಾಷ್ಟ್ರ, ಮತ್ತು ಕರ್ನಾಟಕದ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಹೈಅಲರ್ಟ್ ಘೋಷಿಸಿದೆ. ಕಳೆದ ವರ್ಷ ಮಧ್ಯಪ್ರದೇಶದಿಂದ ತಪ್ಪಿಸಿಕೊಂಡಿದ್ದ ಉಗ್ರರು ಸಿಮಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com