

ಜಾರ್ಖಂಡ್: ತಮ್ಮ ಪಕ್ಷವನ್ನು ಖಂಡಿಸಲು ವಿರೋಧ ಪಕ್ಷಗಳಿಗೆ ಯಾವುದೇ ವಿಷಯ ಸಿಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಜಾರ್ಖಂಡ್‌ಗೆ ಭೇಟಿ ನೀಡಿರುವ ಮೋದಿ, ನಮ್ಮ ಪಕ್ಷವನ್ನು ಟೀಕಿಸಲು ವಿರೋಧ ಪಕ್ಷಗಳಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಇದರಿಂದಾಗಿ ವಿರೋಧ ಪಕ್ಷದ ನಾಯಕರು ಅಸಮಾಧಾನರಾಗಿದ್ದಾರೆ ಎಂದು ಮೋದಿ ವ್ಯಂಗ್ಯವಾಡಿದ್ದಾರೆ.
ಬಿಜೆಪಿಯನ್ನು ಆಯ್ಕೆ ಮಾಡುವ ಮೂಲಕ ನಿರ್ಣಾಯಕ ಆದೇಶ ನೀಡಿ. ರಾಜ್ಯ ಅಭಿವೃದ್ಧಿಗಾಗಿ ಬಿಜೆಪಿ ದುಡಿಯಲಿದೆ. ಈ ನಾಡಿನ ಅಭಿವೃದ್ಧಿಗಾಗಿ ಬಿಜೆಪಿಯನ್ನು ಆಯ್ಕೆ ಮಾಡಿ, ಇಟ್ಟ ನಂಬಿಕೆ ಈಡೇರಿಸುತ್ತೇವೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಮಧ್ಯವರ್ತಿಗಳಿಗೆ ಅಧಿಕಾರವನ್ನು ವಹಿಸಬೇಡಿ. ಇದರಿಂದ ಅವರೇ ಲಾಭ ಪಡೆದುಕೊಳ್ಳುತ್ತಾರೆ. ಹಾಗಾಗಿ ನೇರವಾಗಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ತಮ್ಮ ಕೆಲಸಗಳನ್ನು ಪೂರ್ಣಗೊಳಿಸುವಂತೆ ಕಟ್ಟಾಜ್ಞೆ ಮಾಡಿ, ನಿಮ್ಮ ಆಜ್ಞೆಯನ್ನು ಬಿಜೆಪಿ ಪಾಲಿಸಲಿದೆ ಎಂದು ಮೋದಿ ತಿಳಿಸಿದ್ದಾರೆ.