ನಾಳೆ ಜಮ್ಮು-ಕಾಶ್ಮೀರಕ್ಕೆ ಸೋನಿಯಾ ಭೇಟಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಾಳೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ನಡೆಸಲಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ 5ನೇ ಹಂತದ ಚುನಾವಣೆ ಪ್ರಚಾರಕ್ಕಾಗಿ ಸೋನಿಯಾ ಗಾಂಧಿ ನಾಳೆ ಭೇಟಿ ನೀಡಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಜಮ್ಮು ಕಾಶ್ಮೀರದ ರಾಜ್ಯ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುಲ್ ರಶೀದ್ ಚೌಧರಿ ತಿಳಿಸಿದ್ದಾರೆ.

ನಾಳೆ ಬೆಳಿಗ್ಗೆ 10.30ಕ್ಕೆ ಶಂಗಾಸ್ ಕ್ಷೇತ್ರದಲ್ಲಿ ಕಾಂಗ್ರೆಸ್ ರ್ಯಾಲಿಯನ್ನುದ್ದೇಶಿಸಿ ಸೋನಿಯಾ ಗಾಂಧಿ ಭಾಷಣ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತದ ವೈಖರಿ ಮತ್ತು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯ ಮತ್ತು ಕೇಂದ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಬಗ್ಗೆ ಸೋನಿಯಾ ಗಾಂಧಿ ಪ್ರಸ್ತಾಪಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com