ಅಪ್ರಾಪ್ತನಿಂದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಆರು ವರ್ಷಧ ಬಾಲಕಿ ಮೇಲೆ 13 ವರ್ಷದ ಬಾಲಕ ಲೈಂಗಿಕ...
ಅಪ್ರಾಪ್ತನಿಂದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ 13 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆಂಧ್ರಪ್ರದೇಶದ ಆದೋನಿ ಮೂಲಕ ಕುಟುಂಬಗಳು ರಾಮದೇವ್ ಗಾರ್ಡನ್ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದಾರೆ. ನಿರ್ಮಾಣ ಹಂತದ ಕಟ್ಟಡದ ಬಳಿಯೇ ನೀಡಲಾಗಿರುವ ಸ್ಥಳದಲ್ಲೇ ಶೆಡ್ ಹಾಕಿಕೊಂಡು ವಾಸಿಸುತ್ತುದ್ದಾರೆ.

ಕೃತ್ಯ ಎಸಗಿದ ಬಾಲಕ ಹಾಗೂ ನೊಂದ ಬಾಲಕಿ ಅಕ್ಕ ಪಕ್ಕದ ಶೆಡ್ಗಳಲ್ಲಿ ವಾಸವಿದ್ದರು. ಇತ್ತೀಚೆಗೆ ನೊಂದ ಬಾಲಕಿ ತಂದೆ ಹಾಗೂ ಕೃತ್ಯ ಎಸಗಿದ ಬಾಲಕನ ತಂದೆ ಮದ್ಯದ ನಶೆಯಲ್ಲಿ ಸೋಮವಾರ ರಾತ್ರಿ ಲೈಂಗಿಕ ದೌರ್ಜನ್ಯ ವಿಚಾರವಾಗಿ ಕಿತ್ತಾಡುತ್ತಿದ್ದರು.

ಇದನ್ನು ಕೇಳಿಸಿಕೊಂಡ ಸ್ಥಳೀಯರೋಬ್ಬರು ಕೆ.ಜಿ.ಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಇಬ್ಬರನ್ನೂ ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

2 ವಾರಗಳ ಹಿಂದೆ ಬಾಲಕಿ ಮೇಲೆ 13 ವರ್ಷದ ಬಾಲಕ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ನೊಂದ ಬಾಲಕಿ ತಂದೆ ಪೊಲೀಸರಿಗೆ ತಿಳಿಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಕೃತ್ಯ ಎಸಗಿದ ಬಾಲಕ ತಲೆಮರೆಸಿಕೊಂಡಿದ್ದು, ಶೋಧನಾ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com