50 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್

50 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ ಎಂದು...
50 ಭಾರತೀಯ ಮೀನುಗಾರರನ್ನು ಬಂಧಿಸಿದ ಪಾಕ್
Updated on: 

ಇಸ್ಲಾಮಾಬಾದ್: 50 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಗುರುವಾರ ಬಂಧಿಸಿದ್ದು, 10 ಹಡಗುಗಳನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಅಂತರಾಷ್ಟ್ರೀಯ ಸಮುದ್ರ ಗಡಿ ದಾಟಿದ ಆರೋಪದ ಮೇಲೆ 50 ಭಾರತೀಯ ಮೀನುಗಾರರನ್ನು ಬಂಧಿಸಿರುವ ಪಾಕ್, 10 ಹಡಗುಗಳನ್ನು ವಶಪಡಿಸಿಕೊಂಡಿದೆ.

ಮೀನುಗಾರರನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಮೀನುಗಾರರ ವಿರುದ್ಧ ದೇಶದ ಸಮುದ್ರ ಸಂಬಂಧಿ ಗಡಿ ಉಲ್ಲಂಘನೆ ಆರೋಪದ ಮೇಲೆ ಪ್ರಕರಣ ದಾಖಲಿಸಲು ಪಾಕ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಸಾರ್ಕ್ ಶೃಂಗಸಭೆ ಅಂತ್ಯವಾಗುತ್ತಿದ್ದಂತೆ, ಪಾಕ್ ಭಾರತೀಯ 35 ಮೀನುಗಾರರನ್ನು ನವೆಂಬರ್ ನಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿ, ಅದೇ ರೀತಿ ನವೆಂಬರ್ ನಲ್ಲಿ ಮೀನುಗಾರರನ್ನು ಬಿಡುಗಡೆ ಮಾಡಿತ್ತು. ಅತ್ತ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಮತ್ತೆ 50 ಭಾರತೀಯ ಮೀನುಗಾರರು ಪಾಕ್ ಜೈಲು ಸೇರಿದ್ದಾರೆ.

ಮೀನುಗಾರಿಕೆ ಕಾಯಿದೆ ಮತ್ತು ವಿದೇಶಿ ಕಾಯಿದೆಯಡಿ ಭಾರತೀಯ ಮೀನುಗಾರರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪಾಕ್ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com