ಖ್ಯಾತ ಕಾದಂಬರಿಕಾರ ಎಸ್.ಎಲ್ ಭೈರಪ್ಪ 'ರಾಷ್ಟ್ರೀಯ ಪ್ರಾಧ್ಯಾಪಕ'

ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ...
ಎಸ್ ಎಲ್  ಭೈರಪ್ಪ
ಎಸ್ ಎಲ್ ಭೈರಪ್ಪ

ನವದೆಹಲಿ: ಕನ್ನಡದ ಖ್ಯಾತ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್ ಭೈರಪ್ಪ ಅವರನ್ನು ರಾಷ್ಟ್ರೀಯ ಪ್ರಾಧ್ಯಾಪಕ ಎಂದು ಘೋಷಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಪ್ರಾಧ್ಯಾಪಕ ಗೌರವಕ್ಕೆ ಪಾತ್ರರಾಗಲಿರುವ ಏಕೈಕ ಕನ್ನಡಿಗ ಭೈರಪ್ಪರಾಗಲಿದ್ದಾರೆ. ಇಂದು ಲೋಕಸಭೆಯಲ್ಲಿ ಭಾಷೆಗಳ ರಕ್ಷಣೆ ವಿಷಯಕ್ಕೆ ಸಂಬಂಧಿಸಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು, ಭೈರಪ್ಪ ಅವರಿಗೆ ರಾಷ್ಟ್ರೀಯ ಪ್ರಾಧ್ಯಾಪಕ ಗೌರವ ನೀಡುವುದಾಗಿ ಪ್ರಕಟಿಸಿದರು.

ನಾಡು, ನುಡಿ ರಕ್ಷಣೆಯ ನಿಟ್ಟಿನಲ್ಲಿ ಸೃಜನಶೀಲ ಹಾಗೂ ವೈಚಾರಿಕ ಸಾಹಿತ್ಯದ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಭೈರಪ್ಪನವರು ಶ್ರೀಮಂತಗೊಳಿಸಿದ್ದಾರೆ. ಭೈರಪ್ಪ ಅವರ ಆಗಾಧ ಅನುಭವ, ಜ್ಞಾನ ರಾಷ್ಟ್ರಮಟ್ಟದಲ್ಲಿ ಸದ್ಬಳಕೆಯಾಗಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭೈರಪ್ಪ ಅವರನ್ನು ನ್ಯಾಶನಲ್ ಪ್ರೊಫೆಸರ್ ಗೌರವಕ್ಕೆ ಆಯ್ಕೆ ಮಾಡಿದೆ ಎಂದರು.

ಭೈರಪ್ಪ ಅವರು ರಾಷ್ಟ್ರೀಯ ಪ್ರಾಧ್ಯಾಪಕರಾಗಿ ನೇಮಕಗೊಂಡ ಮೇಲೆ ದೇಶದ ಯಾವುದೇ ವಿಶ್ವ ವಿದ್ಯಾಲಯಗಳಿಗೆ ಹೋಗಿ ಉನ್ನತ ಶಿಕ್ಷಣ ವೃದ್ಧಿಗೆ ಅಗತ್ಯ ಸಲಹೆ, ಸೂಚನೆಗಳನ್ನು ವಿಶೇಷ ಉಪನ್ಯಾಸವನ್ನು ಭೈರಪ್ಪ ಅವರು ನೀಡಬಹುದಾಗಿದೆ.

ಕೇಂದ್ರ ಸರ್ಕಾರ 2009ರಲ್ಲಿ ರಾಷ್ಟ್ರೀಯ ಪ್ರಾಧ್ಯಾಪಕರಿಗೆ ತಿಂಗಳಿಗೆ ರು. 75 ಸಾವಿರ ಗೌರವಧನವನ್ನು ನಿಗದಿಪಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com