
ನವದೆಹಲಿ: ಎಂಎನ್‌ಸಿ ಮಹಿಳಾ ಉದ್ಯೋಗಿ ಮೇಲೆ ಅತ್ಯಾಚಾರವೆಸಗಿರುವ ಆರೋಪದ ಮೇಲೆ ಬಂಧಿಸಲಾಗಿರುವ ಯೂಬರ್ ಕ್ಯಾಬ್ ಚಾಲಕ ಶಿವ ಕುಮಾರ್ ಯಾದವ್‌ನನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸ್ಥಳೀಯ ನ್ಯಾಯಾಲಯದ ನ್ಯಾಯಾಮೂರ್ತಿ ರವೀಂದ್ರ ಕುಮಾರ್ ಪಾಂಡೆ ಅವರು ಆರೋಪಿಗೆ ಡಿಸೆಂಬರ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಉತ್ತರ ಪ್ರದೇಶದ ಮಥರಾ ನಗರದ ಯೂಬರ್ ಕ್ಯಾಬ್ ಚಾಲಕ ಶಿವ ಕುಮಾರ್ ಯಾದವ್ ಭಾನುವಾರ ರಾತ್ರಿ ಎಂಎನ್‌ಸಿ ಮಹಿಳಾ ಉದ್ಯೋಗಿ ಮೇಲೆ ಯ್ಯೂಬರ್ ಕ್ಯಾಬ್‌ನಲ್ಲಿ ಅತ್ಯಾಚಾರವೆಸಗಿದ್ದನು. ಆರೋಪಿ ಶಿವ ಕುಮಾರ್ ಯಾದವ್‌ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಬಂಧನದ ನಂತರ ಆರೋಪಿಯನ್ನು ಮೂರು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದ ನ್ಯಾಯಾಲಯ, ಈಗ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಆದೇಶ ಹೊರಡಿಸಿದೆ.
Advertisement