ಪೆಟ್ರೋಲ್, ಡೀಸೆಲ್ ಲೀಟರ್‌ಗೆ 2 ರುಪಾಯಿ ಇಳಿಕೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆಯಾದ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಸೋಮವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರುಪಾಯಿ ಇಳಿಕೆ ಮಾಡಿವೆ.

ಕಳೆದ ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಭಾರಿ ಇಳಿಕೆಯಾಗಿದೆ. ಆಗಸ್ಟ್‌ನಿಂದ ಇಲ್ಲಿಯವರೆಗೆ ಒಟ್ಟು 8 ಬಾರಿ ಪೆಟ್ರೋಲ್ ಬೆಲೆ ಇಳಿಕೆಯಾಗಿದ್ದು, ಡೀಸೆಲ್ ದರ ಸಹ ಅಕ್ಟೋಬರ್‌ನಿಂದ ಇಲ್ಲಿಯವರೆಗೆ ನಾಲ್ಕು ಬಾರಿ ಇಳಿಕೆಯಾಗಿದೆ.

ಡೀಸೆಲ್ ದರ ಕಡಿಮೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ಬಸ್ ಪ್ರಯಾಣ ದರ ಕಡಿಮೆ ಮಾಡುವ ನಿರೀಕ್ಷೆ ಇತ್ತು. ಆದರೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪೆಟ್ರೋಲ್ ಹಾಗೂ ಡೀಸೆಲ್ ದರ ಆಧರಿಸಿ ಬಸ್ ಪ್ರಯಾಣ ದರ ಇಳಿಕೆ ಮಾಡುವುದು ಅಸಾಧ್ಯ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com