ಜಿಎಸ್‌ಟಿ: ರಾಜ್ಯ,ಕೇಂದ್ರ ರಾಜಿ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಸಂಬಂಧಿಸಿ ಕೇಂದ್ರ...
ಸರಕು ಮತ್ತು ಸೇವಾ ತೆರಿಗೆ  (ಜಿಎಸ್‌ಟಿ)
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸೃಷ್ಟಿಯಾಗಿದ್ದ ಬಿಕ್ಕುಟ್ಟು ಕೊನೆಗೂ ಪರಿಹಾರವಾಗಿದೆ. ಪ್ರವೇಶ ಶುಲ್ಕವನ್ನು ಏಪ್ರಿಲ್ 2016ರಿಂದ ಹೊಸ ತೆರಿಗೆ ವ್ಯವಸ್ಥೆಯ ಭಾಗವಾಗಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಎಸ್‌ಟಿ ಯಿಂದ ಪೆಟ್ರೋಲಿಯಂ ಅನ್ನು ಹೊರಗಿಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

ರಾಜ್ಯ ಸರ್ಕಾರಗಳಿಗೆ ಆಗುವ ನಷ್ಟವನ್ನು ತುಂಬಿಕೊಂಡು ವಿಚಾರವನ್ನು ಸಂವಿಧಾನ ತಿದ್ದುಪಡಿ ವಿಧೇಯಕದಲ್ಲಿ ಹೇಗೆ ಸೇರ್ಪಡೆ ಮಾಡಬಹುದು ಎನ್ನುವ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.

ಈ ಮೂಲಕ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಜಿಎಸ್‌ಟಿ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಸರ್ಕಾರದ ಪ್ರಯತ್ನಕ್ಕೆ ಮೊದಲ ಗೆಲುವು ಸಿಕ್ಕಂತಾಗಿದೆ.

ಜಿಎಸ್‌ಟಿಗೆ ಸಂಬಂಧಿಸಿ ಕರ್ನಾಟಕ ಸೇರಿ ಏಳು ರಾಜ್ಯಗಳ ಹಣಕಾಸು ಸಚಿವರ ಜತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನಡೆಸಿದ ಸುದೀರ್ಘ ಮಾತುಕತೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಕರ್ನಾಟಕವಲ್ಲದೆ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಹರ್ಯಾಣ, ಪಂಜಾಬ್ ರಾಜ್ಯಗಳು ಜಿಎಸ್‌ಟಿಗೆ ಸಂಬಂಧಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದವು.

ಉಳಿದ ರಾಜ್ಯಗಳ ಕಳವಳಗಳನ್ನು ಈಗಾಗಲೇ ಸರ್ಕಾರ ಪರಿಹರಿಸಿದೆ. ಜಿಎಸ್‌ಟಿಗೆ ಪ್ರವೇಶ ಶುಲ್ಕ ಹಾಗೂ ಪೆಟ್ರೋಲಿಯಂ ಉತ್ಪಗನ್ನಗಳನ್ನು ಜಿಎಸ್‌ಟಿಗೆ ಸೇರ್ಪಡೆಗೊಳಿಸುವ ವಿಚಾರ ಕುರಿತು ಕೇಂದ್ರ ಮತ್ತು ರಾಜ್ಯಗಳ ನಡುವೆ ಭಿನ್ನಮತ ಸೃಷ್ಟಿಯಾಗಿತ್ತು. ಪೆಟ್ರೋಲಿಯಂ ಮತ್ತು ಅದರ ಉತ್ಪನ್ನಗಳ ಮೇಲಿನ ತೆರಿಗೆಯಿಂದಲೇ ರಾಜ್ಯಗಳು ಶೇ.50 ರಷ್ಟು ಆದಾಯಗಳಿಸುತ್ತವೆ. ಹಾಗಾಗಿ ಇದನ್ನು ಜಿಎಸ್‌ಟಿಯಿಂದ ಹೊರಗಿಡಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದವು. ಈ ಸಂಬಂಧ ಕಳೆದ ವಾರವಷ್ಟೇ ಒಂದು ಸುತ್ತಿನ ಮಾತುಕತೆ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com