ನವದೆಹಲಿ: ಕೇಂದ್ರ ಸರ್ಕಾರಿ ಕಚೇರಿ, ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ನೌಕರರಿಗೆ ಆಧಾರ್ ಸಂಖ್ಯೆಯಡಿ ಬಯೋ ಮೆಟ್ರಿಕ್ ಹಾಜರಿ ಪದ್ಧತಿ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಖಾತೆಯನ್ನೂ ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಗುರುವಾರ ಈ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ಸಂಸದ ಬಿ.ಎನ್.ಚಂದ್ರಪ್ಪ ಪ್ರಶ್ನೆಗೆ ಈ ಬಗ್ಗೆ ಪ್ರಧಾನಿ ಲಿಖಿತ ಉತ್ತರ ನೀಡಿದ್ದಾರೆ. ದೆಹಲಿ ಕಚೇರಿಗಳಲ್ಲಿ ಡಿಸೆಂಬರ್ ಅಂತ್ಯದೊಳಗೆ ಬಯೋವುಟ್ರಿಕ್ ಹಾಜರಿ ಪದ್ಧತಿ ಜಾರಿಗೊಳಿಸಲಾಗುವುದು.
ಉಳಿದೆಡೆ ಜನವರಿ 26ರೊಳಗೆ ಅನುಷ್ಠಾನಗೊಳಿಸಲಾಗುವುದು. ಆಧಾರ್ ಸಂಖ್ಯೆ ಹೊಂದಿಲ್ಲದ ನೌಕರರಿಗೆ ವಿಶೇಷ ನೋಂದಣಿ ಆಂದೋಲನಗಳನ್ನು ಏರ್ಪಡಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ತ್ವರಿತ ಪೂರ್ಣಗೊಳಿಸಲಾಗುವುದು ಎಂದು ವಿವರಿಸಿದ್ದಾರೆ.
Advertisement