ಸೋನಿಯಾ ಗಾಂಧಿ ಆರೋಗ್ಯ ಸ್ಥಿರ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.
 ನಿನ್ನೆ ರಾತ್ರಿ ಉಸಿರಾಟದ ಸಮಸ್ಯೆ ಹಾಗೂ ನೋವಿನಿಂದ ಬಳಲುತ್ತಿದ್ದ ಸೋನಿಯಾ ಅವರನ್ನು 8.30ರ ಸುಮಾರಿಗೆ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣ ಅವರನ್ನು ಪರಿಶೀಲಿಸಿದ ತಜ್ಞ ವೈದ್ಯರ ತಂಡ ಸೋನಿಯಾ ಅವರಿಗೆ ಶ್ವಾಸನಾಳದಲ್ಲಿ ಸೋಂಕು ಉಂಟಾಗಿರುವುದಾಗಿ ತಿಳಿಸಿ ಚಿಕಿತ್ಸೆ ನೀಡಲು ಪ್ರಾರಂಭಿಸಿದ್ದರು.
ಚಿಕಿತ್ಸೆಗೆ ಸ್ಪಂಧಿಸಿರುವ ಸೋನಿಯಾ ಅವರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ. ಯಾವುದೇ ರೀತಿಯ ಪ್ರಾಣಾಪಾಯವಿಲ್ಲ ಎಂದು ತಜ್ಞರ ವೈದ್ಯರ ತಂಡ ತಿಳಿಸಿದೆ. ಸೋನಿಯಾ ಅನಾರೋಗ್ಯದ ಕುರಿತು ಮಾಹಿತಿ ತಿಳಿದ ಕಾಂಗ್ರೆಸ್ ಮುಖಂಡರು ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದು, ಆಸ್ಪತ್ರೆಯಲ್ಲಿ ಸೋನಿಯಾ ಅವರ ಆರೋಗ್ಯದ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com