ಮತಾಂತರದ ವಿವಾದ: ಪ್ರಧಾನಿ ಮೋದಿ ಸ್ಪಷ್ಟನೆಗೆ ಕೇಜ್ರಿವಾಲ್ ಆಗ್ರಹ

ದೇಶದಲ್ಲಾಗುತ್ತಿರುವ ಮತಾಂತರ ವಿವಾದ ಕುರಿತ ತಮ್ಮ ನಿಲುವು ಸ್ಪಷ್ಟ...
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ: ದೇಶದಲ್ಲಾಗುತ್ತಿರುವ ಮತಾಂತರ ವಿವಾದ ಕುರಿತ ತಮ್ಮ ನಿಲುವು ಸ್ಪಷ್ಟ ಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.

ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜು ಕಾರ್ಯಕ್ರಮವೊಂದರಲ್ಲಿ ಹಾಜರಿದ್ದ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುದ್ದಿಗಾರರೊಂದಿಗೆ ಮಾತನಾಡಿ, ಮತಾಂತರದ ಕುರಿತು ಮೊದಲು ಮೋದಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಅಭಿವೃದ್ಧಿ ವಾಗ್ದಾನದಂತೆ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕಳೆದ 6 ತಿಂಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ.

ಪ್ರೀತಿ, ಜಿಹಾದ್, ಜಾತಿ, ಮತ ಎಂದು ಯಾವಾಗಲೂ ಮಾತನಾಡುತ್ತಿರುವ ಬಿಜೆಪಿ, ಗುಜರಾತ್‌ನಲ್ಲಿ ಸರ್ಕಾರ ನಡೆಸುತ್ತಿದ್ದಾಗ ಕೋಮುಗಲಭೆಗಳೇ ಆಗಿರಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com