

ಶ್ರೀನಗರ/ರಾಂಚಿ: ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ನ ವಿಧಾನಸಭೆ ಚುನಾವಣೆಯ 5ನೇ ಹಾಗೂ ಕೊನೆಯ ಹಂತದ ಮತದಾನ ಆರಂಭವಾಗಿದೆ.
ಉಗ್ರರ ದಾಳಿಯ ಬೆದರಿಕೆ ಹಾಗೂ ಕೊರೆಯುವ ಚಳಿಯನ್ನು ಲೆಕ್ಕಿಸದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.
20 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು ಡಿಸಿಎಂ ತಾರ ಚಂದ್ ಸೇರಿ 213 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐದನೇ ಹಂತದ ಮತದಾನದಲ್ಲಿ ಒಟ್ಟು 2,366 ಮತಕಟ್ಟೆಗಳಲ್ಲಿ 18 ಲಕ್ಷ ಮತದಾರರು ಮತದಾನ ಮಾಡಲಿದ್ದಾರೆ. ಅಭ್ಯರ್ಥಿಗಳ ಭವಿಷ್ಯ ಡಿಸೆಂಬರ್ 23ಕ್ಕೆ ತಿಳಿಯಲಿದೆ.
ಜಾರ್ಖಂಡ್‌ನ 16 ಅಸೆಂಬ್ಲಿ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ಒಟ್ಟು 3,773 ಮತಕಟ್ಟೆಗಳನ್ನು ತೆರೆಯಲಾಗಿದೆ. ಅದರಲ್ಲಿ 833 ಮತಕಟ್ಟೆಗಳನ್ನು ಅತಿ ಸೂಕ್ಷ್ಮ ಮತಕಟ್ಟೆ ಹಾಗೂ 1,496 ಮತಕಟ್ಟೆಗಳನ್ನು ಸೂಕ್ಷ್ಮ ಎಂದು ಗುರುತಿಸಲಾಗಿದೆ.