
ಜಾಲೌನ್(ಉತ್ತರಪ್ರದೇಶ): ಉತ್ತರಪ್ರದೇಶದ ಜಾಲೌನ್ ಬಳಿ ಲಾರಿ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಕಾರ್ಮಿಕರನ್ನು ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿ ಹೊಡೆದಿದೆ. ಪರಿಣಾಮ ಐವರು ಮಹಿಳೆಯರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ 12ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
Advertisement