
ಇಂಫಾಲ್: ಕಚ್ಛಾ ಬಾಂಬ್ ಸ್ಫೋಟಗೊಂಡ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದು, ನಾಲ್ಕು ಜನರು ಗಾಯಗೊಂಡಿರುವ ಘಟನೆ ಮಣಿಪುರ್ ನ ಇಂಫಾಲ್‌ನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಇಂಪಾಲ್ ಮಾರುಕಟ್ಟೆಯ ಬಳಿ ರಸ್ತೆ ಬದಿಯಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಹೊರ ರಾಜ್ಯದ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಸ್ತೆ ಬದಿಯಲ್ಲಿದ್ದ ಟೀ ಅಂಗಡಿಯೊಂದರಲ್ಲಿ 7 ಜನ ಕಾರ್ಮಿಕರು ಟೀ ಕುಡಿಯುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಮೃತರನ್ನು ಶಿವ ಯಾದವ್(35), ಲಲನ್ (35) ಮತ್ತು ಕುಸುಮ್ ಪಂಡಿತ್(60) ಎಂದು ಗುರಿತಿಸಲಾಗಿದೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement